ಅಮರಾವತಿ: ದೇಶದೆಲ್ಲೆಡೆ ದೀಪಾವಳಿ (Deepavali 2024) ಸಂಭ್ರಮ ಮನೆ ಮಾಡಿದೆ. ಇದರ ಜತೆಗೆ ಕೆಲವೊಂದೆಡೆ ಪಟಾಕಿ ಸಿಡಿದು ದುರಂತ ನಡೆದಿರುವ ಘಟನೆಯೂ ವರದಿಯಾಗುತ್ತಿದೆ. ಅಂತಹದ್ದೇ ದುರಂತವೊಂದು ಆಂಧ್ರ ಪ್ರದೇಶದಲ್ಲಿ ನಡೆದಿದೆ. ಪಟಾಕಿ ಸಿಡಿದು ವ್ಯಕ್ತಿಯೊಬ್ಬ ಮೃತಪಟ್ಟರೆ, 6 ಮಂದಿ ಗಾಯಗೊಂಡಿದ್ದಾರೆ. ವ್ಯಕ್ತಿಯೊಬ್ಬ ಸ್ಕೂಟರ್‌ನಲ್ಲಿ ಪಟಾಕಿ ಸಾಗಿಸುತ್ತಿದ್ದಾಗ ಅದು ಸಿಡಿದು ಏಲೂರು ಜಿಲ್ಲೆಯಲ್ಲಿ ದುರಂತ ಸಂಭವಿಸಿದೆ. ದೀಪಾವಳಿಯ ವಿಶೇಷ ಪಟಾಕಿಯಾದ ಈರುಳ್ಳಿ ಬಾಂಬ್ (Onion Bomb) ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಈರುಳ್ಳಿ ಬಾಂಬ್ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರ ಸ್ಕೂಟರ್ ಎಳೂರಿನ ದೇವಾಲಯದ ಬಳಿ ಹೊಂಡಕ್ಕೆ ಬಿದ್ದು ಡಿಕ್ಕಿ ಹೊಡೆದಾಗ ಅವರು ಸ್ಫೋಟಗೊಂಡವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಪಟಾಕಿ ಐಇಡಿ ಅಥವಾ ಸುಧಾರಿತ ಸ್ಫೋಟಕ ಸಾಧನದಷ್ಟೇ ಶಕ್ತಿಯುತವಾಗಿತ್ತು ಎಂದು ಹೇಳಲಾಗಿದೆ.
#DiwaliCelebration turns tragic, One person was killed and 6 others were injured when an #Explosion occurred while carrying a bag full of Fire #Crackers (onion bombs) on a scooter in #Eluru, #AndhraPradesh , caught on #CCTV.
— Surya Reddy (@jsuryareddy) October 31, 2024
The rider lost control over the scooter due to a small… pic.twitter.com/lU9awhi5vJ
ಸಿಸಿಟಿವಿ ದೃಶ್ಯದಲ್ಲಿ ಏನಿದೆ?
ದುರಂತದ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಲಭ್ಯವಾಗಿದೆ. ಮಧ್ಯಾಹ್ನ 12.17 ವೇಳೆಗೆ ಬಿಳಿ ಸ್ಕೂಟರ್‌ನಲ್ಲಿ ಇಬ್ಬರು ವ್ಯಕ್ತಿಗಳು ಕಿರಿದಾದ ಬೀದಿಯಲ್ಲಿ ವೇಗವಾಗಿ ಸಾಗುತ್ತಿರುವುದು ಕಂಡುಬಂದಿದೆ. ರಸ್ತೆ ಅಗಲವಾಗಿ ಮುಖ್ಯ ರಸ್ತೆಯನ್ನು ಸೇರುವ ಹಂತವನ್ನು ಸಮೀಪಿಸುತ್ತಿದ್ದಂತೆ ಬೈಕ್ ಸ್ಫೋಟಗೊಂಡಿದೆ. ಈ ವೇಳೆ ಜಂಕ್ಷನ್‌ನಲ್ಲಿ ಐದರಿಂದ ಆರು ಜನರ ಒಂದು ಸಣ್ಣ ಗುಂಪು ಸೇರಿತ್ತು.
ಸ್ಫೋಟದ ತೀವ್ರತೆ ಎಷ್ಟು ತೀವ್ರವಾಗಿತ್ತು ಎಂದರೆ ಇಡೀ ಪ್ರದೇಶವು ಗಾಢ ಬೂದು ಹೊಗೆಯಿಂದ ಆವೃತವಾಗಿತ್ತು. ಕಾಗದದ ತುಂಡುಗಳು ಸುತ್ತಲೂ ಹಾರಾಡಿವೆ. ಹೊಗೆ ತೆರವುಗೊಳಿಸುತ್ತಿದ್ದಂತೆ ಇಬ್ಬರು ಸುರಕ್ಷಿತವಾಗಿ ಸ್ಥಳದಿಂದ ಓಡಿ ಹೋಗುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್ ಮತ್ತು ಮೃತ ವ್ಯಕ್ತಿಯ ದೇಹದ ಭಾಗಗಳು ಚದುರಿ ಬಿದ್ದಿರುವುದು ಕೂಡ ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ.
ಸ್ಫೋಟದಿಂದ ತಪ್ಪಿಸಿಕೊಂಡ ಇಬ್ಬರು ತಮ್ಮ ಕಿವಿಗಳನ್ನು ಹಿಡಿದುಕೊಂಡು, ಸಹಾಯಕ್ಕಾಗಿ ಸಮೀಪದ ಮನೆ ಬಾಗಿಲನ್ನು ತಟ್ಟಿದ್ದಾರೆ. ಮೃತನನ್ನು ಸುಧಾಕರ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಆರು ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಪಟಾಕಿ ಗಾಯ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ವಿಶೇಷ ಕೇಂದ್ರ
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಉಂಟಾಗುವ ಪಟಾಕಿ ಅವಘಡಗಳಿಂದ ಸಂಭವಿಸುವ ಕಣ್ಣಿನ ಹಾನಿ ಅಥವಾ ಗಾಯದ ಚಿಕಿತ್ಸೆಗಾಗಿ ನಗರದ ಕಣ್ಣಿನ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ. ಹಬ್ಬದ ಸಂದರ್ಭದಲ್ಲಿ ದಿನದ 24 ಗಂಟೆಯೂ ಸೇವೆ ನೀಡಲು ಸಜ್ಜಾಗಿವೆ.
ಮಿಂಟೊ ಆಸ್ಪತ್ರೆ, ನಾರಾಯಣ ನೇತ್ರಾಲಯ, ನೇತ್ರಧಾಮ, ಶಂಕರ ಹಾಸ್ಪಿಟಲ್, ಡಾ. ಅಗರವಾಲ್ ಸೇರಿ ವಿವಿಧ ಕಣ್ಣಿನ ಆಸ್ಪತ್ರೆಗಳು ಚಿಕಿತ್ಸೆಗೆ ಬೇಕಾದ ಔಷಧಗಳನ್ನು ದಾಸ್ತಾನು ಮಾಡಿಕೊಂಡಿವೆ. ಅದೇ ರೀತಿ, ಪ್ರತ್ಯೇಕ ಹಾಸಿಗೆ ವ್ಯವಸ್ಥೆಯನ್ನು ಮಿಂಟೊ, ನಾರಾಯಣ ನೇತ್ರಾಲಯ ಸೇರಿ ಕೆಲ ಆಸ್ಪತ್ರೆಗಳಲ್ಲಿ ಮಾಡಲಾಗಿದೆ.
ಈ ಸುದ್ದಿಯನ್ನೂ ಓದಿ: Viral Video: ನಾಯಿ ಬಾಲಕ್ಕೆ ಪಟಾಕಿ ಕಟ್ಟಿ ಬೆಂಕಿ ಇಟ್ಟ ದುಷ್ಕರ್ಮಿಗಳು; ಎಲ್ಲೆಡೆಯಿಂದ ಛೀಮಾರಿ