Sunday, 15th December 2024

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕ

ವದೆಹಲಿ: ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯನ್ನಾಗಿ ನೇಮಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನ್ಯಾಯಮೂರ್ತಿ ಎ.ಎಂ.ಮಾರ್ಗೇ ಅವರಿಗೆ ಅದೇ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಮುಖ್ಯ ನ್ಯಾಯಾಮೂರ್ತಿ ಯಾಗಿದ್ದ ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಅದೇ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಟ್ವಿಟರ್‌ನಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದು, ‘ಸಾಂವಿಧಾನಿಕ ನಿಬಂಧನೆಗಳ ಅನುಸಾರ ನ್ಯಾ.ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ.

ನ್ಯಾ. ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮತ್ತು ನ್ಯಾ.ಎ.ಎಂ. ಮಾರ್ಗೇ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ’ ಎಂದು ತಿಳಿಸಿದ್ದಾರೆ.