Friday, 12th April 2024

ರಾಷ್ಟ್ರಪತಿ ಭವನದಲ್ಲಿ 119 ಮಂದಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

ನವದೆಹಲಿ: ಉದ್ಯಮಿ ಡಾ.ವಿಜಯ ಸಂಕೇಶ್ವರ, ಪರಿಸರ ಪ್ರೇಮಿ ತುಳಸಿ ಗೋವಿಂದ ಗೌಡ, ಸಮಾಜ ಸೇವಕ ಹರೇಕಳ ಹಾಜಬ್ಬ, ಮಾಜಿ ಹಾಕಿ ಆಟಗಾರ ಎಂ.ಪಿ. ಗಣೇಶ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ‘ಪದ್ಮ’ ಪ್ರಶಸ್ತಿ ಯನ್ನು ಸೋಮವಾರ ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 119 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 7 ಪದ್ಮವಿಭೂಷಣ, 10 ಪದ್ಮಭೂಷಣ, 102 ಪದ್ಮಶ್ರೀ ಪ್ರಶಸ್ತಿ ಗಳನ್ನು ವಿವಿಧ ಕ್ಷೇತ್ರದ ಸಾಧಕರಿಗೆ ನೀಡಲಾಗಿದೆ. ಪ್ರಶಸ್ತಿ ಪಡೆದವರಲ್ಲಿ 29 ಮಹಿಳೆಯರು, ಒಬ್ಬರು ತೃತೀಯ ಲಿಂಗಿ ಸೇರಿದ್ದಾರೆ.

ಜಾನಪದ ಕಲಾ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಮಂಜಮ್ಮ ಜೋಗತಿ, ಮಂಗಳೂರಿನ ಪೊಸಪಡ್ಪು ಎಂಬ ಕುಗ್ರಾಮದಲ್ಲಿ ಶಾಲೆ ನಿರ್ಮಾಣ ಮಾಡಿ, ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದ ಹರೇಕಳ ಹಾಜಬ್ಬ, ವೃಕ್ಷಮಾತೆ’ ಎಂದೇ ಖ್ಯಾತಿಯಾಗಿರುವ ತುಳಸಿ ಗೋವಿಂದ ಗೌಡ, ಬಿ. ಮಂಜಮ್ಮ ಜೋಗತಿ ಸೇರಿದಂತೆ ರಾಜ್ಯದ ಎಂಟು ಮಂದಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪೇಜಾವರ ಶ್ರೀ, ಡಾ. ಬಿ. ಎಂ. ಹೆಗ್ಡೆ, ಜಪಾನ್‌ನ ಮಾಜಿ ಪ್ರಧಾನಿ ಶಿಂಬೊ ಅಬೆ, ಗಾಯಕ ಎಸ್‌. ಪಿ. ಬಾಲಸುಬ್ರಮಣ್ಯಂ (ಮರಣೋ ತ್ತರ), ನರಿಂದರ್ ಸಿಂಗ್ ಕಪಾನಿ (ಮರಣೋತ್ತರ), ಮೌಲಾನಾ ವಹೀದುದ್ದೀನ್ ಖಾನ್, ಬಿ. ಬಿ. ಲಾಲ್, ಸುದರ್ಶನ್ ಸಾಹೋ ಪದ್ಮವಿಭೂಷಣ ಪ್ರಶಸ್ತಿ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!