Saturday, 14th December 2024

ಅಪ್ರಚೋದಿತ ಶೆಲ್ ದಾಳಿ: ಪಾಕಿಸ್ತಾನ ಯೋಧರ ಹತ್ಯೆ

ಜಮ್ಮು: ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಪಡೆಯ ಇಬ್ಬರು ಪಾಕಿಸ್ತಾನ ಯೋಧರನ್ನು ಭಾರತೀಯ ಸೇನೆ ಹತ್ಯೆ ಮಾಡಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

ರಾಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ದಾಳಿಗೆ ತಕ್ಕ ಉತ್ತರ ನೀಡಿ ಇಬ್ಬರು ಪಾಕಿಸ್ತಾನ ಸೇನೆಯ ಯೋಧರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾಪಡೆ ಮಾಹಿತಿ ನೀಡಿದೆ.

ಡಿ.13 ರಂದೂ ಕೂಡ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ಮುಗ್ದ ನಾಗರೀಕರನ್ನು ಗುರುಯಾಗಿರಿಸಿಕೊಂಡು ದಾಳಿ ನಡೆಸಿತ್ತು. ಭಾರತೀಯ ಸೇನೆ ದಿಟ್ಟ ಉತ್ತರ ನೀಡಿತ್ತು ಎಂದು ಲೆಫ್ಟಿನೆಂಟ್ ಜನರಲ್ ಸತೀಂದರ್ ಕುಮಾರ್ ಸೈನಿಯವರು ಹೇಳಿದ್ದಾರೆ.