Saturday, 23rd November 2024

ಪಾಕಿಸ್ತಾನದ ವಿದೇಶಾಂಗ ಸಚಿವರಿಗೆ ಸ್ವಾಗತ ಕೋರಿದ ಜೈಶಂಕರ್

ವದೆಹಲಿ: ಶಾಂಘೈ ಸಹಕಾರ ಸಂಘಟನೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನದ ವಿದೇ ಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ರನ್ನು ವಿದೇಶಾಂಗ ಸಚಿವ ಜೈಶಂಕರ್ ಗೋವಾದಲ್ಲಿ ಸ್ವಾಗತಿಸಿದರು.

ಭುಟ್ಟೊ ಅವರು ಸುಮಾರು 12 ವರ್ಷಗಳಲ್ಲಿ ಭಾರತಕ್ಕೆ ಭೇಟಿ ನೀಡಿದ ನೆರೆಯ ದೇಶದ ಮೊದಲ ಹಿರಿಯ ನಾಯಕ ರಾಗಿದ್ದಾರೆ.

ಆದಾಗ್ಯೂ, ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವರ ನಡುವಿನ ದ್ವಿಪಕ್ಷೀಯ ಸಂಬಂಧದ ಬಗ್ಗೆ ಇನ್ನೂ ಯಾವುದೇ ದೃಢೀಕರಣವಿಲ್ಲ.

ಕೌನ್ಸಿಲ್ ಆಫ್ ಫಾರಿನ್ ಮಿನಿಸ್ಟರ್ ಸಭೆಯಲ್ಲಿ ಪಾಲ್ಗೊಳ್ಳಲು ಭುಟ್ಟೋ ಭಾರತಕ್ಕೆ ಭೇಟಿ ನೀಡಿದ್ದು, ಜಮ್ಮು ಮತ್ತು ಕಾಶ್ಮೀರ ದಲ್ಲಿ ಇಸ್ಲಾಮಾಬಾದ್‍ನ ಗಡಿಯಾಚೆಗಿನ ಭಯೋ ತ್ಪಾದನೆಗೆ ತಡೆ ನೀಡುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಉಭಯ ದೇಶಗಳ ನಾಯಕರು ಮಾತುಕತೆ ನಡೆಸುವ ಸಾಧ್ಯತೆಗಳಿವೆ.

ಶುಕ್ರವಾರ ಗೋವಾದ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲ ಯದ ಪಾಕಿಸ್ತಾನ-ಅಫ್ಘಾನಿಸ್ತಾನ-ಇರಾನ್ ವಿಭಾಗದ ಮುಖ್ಯಸ್ಥರಾಗಿರುವ ಜಂಟಿ ಕಾರ್ಯದರ್ಶಿ ಜೆಪಿ ಸಿಂಗ್ ಬರಮಾಡಿಕೊಂಡರು.

2022 ರಲ್ಲಿ ನಡೆದ ಸಮರ್ಕಂಡ್ ಎಸ್‍ಸಿಒ ಶೃಂಗಸಭೆಯಲ್ಲಿ ಭಾರತವು ಎಸ್‍ಸಿಒದ ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ. ಈ ವರ್ಷ, ಗೋವಾದಲ್ಲಿ ವಿದೇಶಾಂಗ ಮಂತ್ರಿಗಳ ಸಭೆ ಸೇರಿದಂತೆ ಹಲವಾರು ಪ್ರಮುಖ ಎಸ್‍ಸಿಒ ಸಭೆಗಳನ್ನು ಭಾರತ ಆಯೋಜಿ ಸಿದೆ.