Friday, 13th December 2024

ಎ.1ರಂದು ಪರೀಕ್ಷಾ ಪೇ ಚರ್ಚಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯ ಕ್ರಮದ 5ನೇ ಆವೃತ್ತಿ ಎ. 1ರಂದು ಹೊಸದಿಲ್ಲಿಯ ಟಾಲ್ಕೋಟಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕೇಂದ್ರ ಸರಕಾರ ಪ್ರಕಟಿಸಿದೆ.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಪರೀಕ್ಷೆಯ ಕಾಲದಲ್ಲಿ ಮನಸ್ಸಿನ ಮೇಲೆ ಆಗುವ ಒತ್ತಡವನ್ನು ನಿಭಾ ಯಿಸುವ ಬಗ್ಗೆ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ಸೃಜನಾತ್ಮಕ ಬರಹಕ್ಕಾಗಿ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಶ್ವಾದ್ಯಂತ ಹಲವಾರು ಮಕ್ಕಳು, ಅವರ ಪೋಷಕರು ಹಾಗೂ ಶಿಕ್ಷಕರು ಸೇರಿ ಅಂದಾಜು 15.7 ಲಕ್ಷ ಮಂದಿ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎಂದು ತಿಳಿಸಲಾಗಿದೆ.