ನವದೆಹಲಿ: ಸಂಸತ್ತಿನ (Parliament) ಬಳಿ ಡಿ. 25ರಂದು ಮೈಗೆ ಬೆಂಕಿ ಹಚ್ಚಿಕೊಂಡಿದ್ದ 26 ವರ್ಷದ ಯುವಕನೊಬ್ಬ ಚಿಕಿತ್ಸೆ ವೇಳೆ ಶುಕ್ರವಾರ (ಡಿ. 27) ಡಾ. ರಾಮ್ ಮನೋಹರ್ ಲೋಹಿಯಾ (RML) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ (Self Harming)
संसद भवन के बाहर जितेंद्र ने किया आत्मदाह..झगड़े से तंग आकर लगी शरीर में आग। RML अस्पताल में जिंदगी और मौत के बीच झुझ रहा है जितेंद्र।@AamAadmiParty pic.twitter.com/84ETqL4hH8
— Suresh Jha (@jhasureshjourno) December 25, 2024
ಉತ್ತರ ಪ್ರದೇಶದ(Uttar Pradesh) ಬಾಗ್‌ಪತ್‌ನ ಜಿತೇಂದ್ರ ಎಂಬ ಯುವಕ ಬುಧವಾರ ಹೊಸ ಸಂಸತ್ ಕಟ್ಟಡದ ಬಳಿ ಪೆಟ್ರೋಲ್‌ನಂತಹ ದ್ರವವನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು. ಸಂಸತ್ತಿನ ಬಳಿ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ನಂತರ ಆತನನ್ನು ಆರ್‌ಎಂಎಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪ್ರಾಥಮಿಕ ತನಿಖೆಗಳ ಪ್ರಕಾರ, ಬಾಗ್‌ಪತ್‌ನಲ್ಲಿನ ಕೆಲವು ಜನರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಆತ್ಮಹತ್ಯೆಗೆ ಮುಂದಾಗಿದ್ದಾನೆ ಎನ್ನಲಾಗಿದೆ. ಅವರ ಕುಟುಂಬವು ಮತ್ತೊಂದು ಕುಟುಂಬದ ಮೇಲಿನ ಎರಡು ಹಲ್ಲೆಗಳ ಪ್ರಕರಣಗಳನ್ನು ಎದುರಿಸುತ್ತಿದೆ. ಇದರಿಂದಾಗಿ ಆತ ಅಸಮಾಧಾನಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಶೇ. 95ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆತ ಶುಕ್ರವಾರ ಮುಂಜಾನೆ 2.23ಕ್ಕೆ ಸಾವನ್ನಪ್ಪಿದ್ದಾನೆ. ಮರಣೋತ್ತರ ಪರೀಕ್ಷೆಯ ನಂತರ ಜಿತೇಂದ್ರ ಅವರ ಮೃತ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬುಧವಾರ ಹೊಸ ಸಂಸತ್ ಭವನದ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕನ ದೇಹಕ್ಕೆ ಕಂಬಳಿ ಸುತ್ತಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ನಡೆದ ಸ್ಥಳದಿಂದ ಪೊಲೀಸರು ಪೆಟ್ರೋಲ್ ಬಾಟಲಿ ಮತ್ತು ಅರ್ಧ ಸುಟ್ಟ ನೋಟೊಂದನ್ನು ವಶಪಡಿಸಿಕೊಂಡಿದ್ದರು.
ಹೆಂಡತಿ-ಮಗು ಕೊಲೆಗೈದು ಪೋಷಕರ ಮೇಲೆ ಹಲ್ಲೆ
ವ್ಯಕ್ತಿಯೊಬ್ಬ ತನ್ನ ಕುಟುಂಬ ಸದಸ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಭೀಕರ ಘಟನೆ ಗುಜರಾತ್ನಲ್ಲಿ(Gujarat) ನಡೆದಿದೆ. ಈ ದಾಳಿಯಲ್ಲಿ ಪತ್ನಿ ಹಾಗೂ ಮಗು ಪ್ರಾಣ ಕಳೆದುಕೊಂಡಿದ್ದಾರೆ. ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊನೆಗೆ ವ್ಯಕ್ತಿ ಕೂಡ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಭಯಾನಕ ಘಟನೆಯಿಂದಾಗಿ ಸೂರತ್‌ನಾದ್ಯಂತ(Surat) ಆತಂಕಕಾರಿ ವಾತಾವರಣ ಸೃಷ್ಟಿಯಾಗಿದೆ.
ವ್ಯಕ್ತಿಯೊಬ್ಬ ತನ್ನ ಹೆಂಡತಿ, ಮಗುವನ್ನು ಬರ್ಬರವಾಗಿ ಕೊಂದು ಪೋಷಕರ ಮೇಲೆ ಹಲ್ಲೆ ನಡೆಸಿ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ. ಸೂರತ್‌ನ ಸರ್ತಾನಾ ಪ್ರದೇಶದಲ್ಲಿ ನಡೆದ ಭೀಕರ ಸಾಮೂಹಿಕ ಹತ್ಯೆ ಘಟನೆಯಿಂದಾಗಿ ಇಡೀ ನಗರ ಬೆಚ್ಚಿ ಬಿದ್ದಿದೆ. ಸ್ಮಿತ್ ಜಿಯಾನಿ ಎಂಬ ವ್ಯಕ್ತಿ ತನ್ನ ಕುಟುಂಬಕ್ಕೆ ಚಾಕುವಿನಿಂದ ಹಲ್ಲೆ ನಡೆಸಿ, ಪತ್ನಿ ಮತ್ತು ಮಗುವನ್ನು ಕೊಂದು, ಪೋಷಕರನ್ನು ಗಂಭೀರವಾಗಿ ಗಾಯಗೊಳಿಸಿದ್ದಾನೆ. ನಂತರ ಸ್ಮಿತ್ ತನ್ನ ಕುತ್ತಿಗೆಯನ್ನು ಸೀಳಿಕೊಂಡು ತಾನೂ ಪ್ರಾಣ ಕಳೆದುಕೊಳ್ಳಲು ಮುಂದಾಗಿದ್ದಾನೆ.
ಸ್ಮಿತ್ ಮತ್ತು ಅವರ ಪೋಷಕರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವನ ಪತ್ನಿ ಮತ್ತು ಮಗು ಹತ್ಯೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಸಾರ್ಥನಾ ಪೊಲೀಸರು ತನಿಖೆ ಆರಂಭಿಸಿದ್ದು, ಈ ಭೀಕರ ಕೃತ್ಯಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಮೂಲತಃ ಅಮ್ರೇಲಿಯ ಸಾವರಕುಂಡ್ಲಾದ ಸ್ಮಿತ್ ಕುಟುಂಬದಲ್ಲಿ ಆಂತರಿಕ ಕಲಹವಿತ್ತು ಎಂದು ತಿಳಿದು ಬಂದಿದೆ. ಕೌಟುಂಬಿಕ ಸಮಸ್ಯೆ ಮತ್ತು ಒತ್ತಡಗಳಿಂದಾಗಿ ಸ್ಮಿತ್ ಈ ಕೃತ್ಯ ಎಸಗಿರಬಹುದು ಎಂದು ಹೇಳಲಾಗುತ್ತಿದೆ.
ಈ ಘಟನೆಯು ಸೂರತ್‌ನಾದ್ಯಂತ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಈ ದುರಂತ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಸ್ಮಿತ್ ಪೋಷಕರು ಚೇತರಿಸಿಕೊಂಡ ಮೇಲೆ ಹತ್ಯೆಯ ಹಿಂದಿನ ಉದ್ದೇಶ ಮತ್ತು ಕಾರಣ ತಿಳಿಯಬಹುದು ಎಂದು ಹೇಳಲಾಗುತ್ತಿದೆ.
ಈ ಸುದ್ದಿಯನ್ನೂ ಓದಿ:Haryana Horror: ಹಾಡಹಗಲೇ ಎಲ್ಲರದುರೇ ಬಾಲಕನನ್ನು ಇರಿದು ಕೊಂದ ದುರುಳರು; ರಕ್ಷಣೆಗೆ ಎಷ್ಟೇ ಕೂಗಿದರೂ ನೆರವಿಗೆ ಬಾರದ ಜನ!