Saturday, 14th December 2024

ಜೀವನ್ಮರಣ ಸ್ಥಿತಿಯಲ್ಲಿದ್ದ ಮಹಿಳೆಯ ಆರೈಕೆಯಲ್ಲಿ ನಿರ್ಲಕ್ಷ್ಯ: ಸಾವು

ಭೋಪಾಲ್‌: ಮಧ್ಯಪ್ರದೇಶದ ಸಾಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ದೀಪಾವಳಿ ಸಂಭ್ರಮಾಚರಣೆಯಲ್ಲಿ ತೊಡಗಿ, ತೀವ್ರ ಅಸ್ವಸ್ಥ ಮಹಿಳೆಯ ಬಗ್ಗೆ ನಿರ್ಲಕ್ಷ್ಯ ಮಾಡಿದ ಕಾರಣದಿಂದ ಮೃತಪಟ್ಟಿದ್ದಾರೆ.

ಹೆರಿಗೆ ವಾರ್ಡ್‌ನಲ್ಲಿ ಸಂಭವಿಸಿದ ಈ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ನರ್ಸ್ ಒಬ್ಬರನ್ನು ಅಮಾನತು ಮಾಡಲಾಗಿ, ವೈದ್ಯರಿಗೆ ಶೋಕಾಸ್ ನೋಟಿಸ್ ನೀಡಲಾ ಗಿದೆ.

ಸಂಭ್ರಮಿಸುತ್ತಿದ್ದ ವೇಳೆ ಜೀವನ್ಮರಣ ಸ್ಥಿತಿಯಲ್ಲಿದ್ದ ಮಹಿಳೆಯ ಆರೈಕೆಯನ್ನು ನಿರ್ಲಕ್ಷಿಸಲಾಗಿತ್ತು. ಬುಂಡೇಲ್‌ಖಂಡ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುತ್ತಿರುವ ದೃಶ್ಯದ ವಿಡಿಯೊ ವೈರಲ್ ಆಗಿತ್ತು.

ಘಟನೆಗೆ ಸಂಬಂಧಿಸಿದಂತೆ ನರ್ಸ್ ಒಬ್ಬರನ್ನು ಅಮಾನತು ಮಾಡಲಾಗಿದ್ದು, ವೈದ್ಯರೊಬ್ಬರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಪ್ರಸೂತಿ ವಿಭಾಗದ ಹೆರಿಗೆ ವಾರ್ಡ್ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ ಐದು ಮಂದಿಯನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.