Saturday, 14th December 2024

ಹೋಟೆಲ್‌ನಲ್ಲಿ ಅಗ್ನಿ ಅವಘಡ: ಮೂವರು ಮಹಿಳೆಯರು ಸೇರಿ 6 ಮಂದಿ ಸಾವು

ಟ್ನಾ(ಬಿಹಾರ): ಪಟ್ನಾ ಜಂಕ್ಷನ್ ರೈಲು ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಹಿಳೆಯರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಹೋಟೆಲ್‌ನಲ್ಲಿ ಸಿಲುಕಿದ್ದ ಸುಮಾರು 20ಕ್ಕೂ ಹೆಚ್ಚು ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಮಿಶ್ರಾ ತಿಳಿಸಿದ್ದಾರೆ.

ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಅವರ ಗುರುತು ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಅಗ್ನಿಶಾಮಕ ಡಿಐಜಿ ಮೃತ್ಯುಂಜಯ್ ಕುಮಾರ್ ಚೌಧರಿ, ಬೆಳಿಗ್ಗೆ 11 ಗಂಟೆ ಸುಮಾರಿಗೆ ನಮಗೆ ಮಾಹಿತಿ ಸಿಕ್ಕಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಸೂಕ್ತ ತನಿಖೆ ಬಳಿಕ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದಿದ್ದಾರೆ.