ಪಾಟ್ನಾ: ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಸಭಾ ಸಂಸದ ಸಂಜಯ್ ಕುಮಾರ್ ಝಾ ಅವರನ್ನು ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ಕೇಂದ್ರ ಸರ್ಕಾರದಿಂದ ವಿಶೇಷ ಆರ್ಥಿಕ ಪ್ಯಾಕೇಜ್ ಕೋರಿ ನಿರ್ಣಯವನ್ನು ಅಂಗೀಕರಿಸಿತು.