ಸಮಯ ಮೀರಿದ್ದರಿಂದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು.
ಉತ್ತರ ಪ್ರದೇಶ ಮತ್ತು ಅಸ್ಸಾಂನ ಪ್ರತಿಕ್ರಿಯೆ ದಾಖಲಿಸಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಪೀಠ, ಹೋಳಿ ರಜೆ ನಂತರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿತು.
ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ಪವನ್ ಖೇರಾ ವಿರುದ್ಧ ಹಲವು ಎಫ್ ಐಆರ್ ದಾಖಲಾಗಿವೆ. ಈ ಹಿಂದೆ ಫೆಬ್ರವರಿ 27 ರಂದು ಸುಪ್ರೀಂಕೋರ್ಟ್ ಪವನ್ ಖೇರಾ ಅವರ ಮಧ್ಯಂತರ ಜಾಮೀನು ಅವಧಿಯನ್ನು ಇಂದಿನವರೆಗೂ ವಿಸ್ತರಿಸಿತ್ತು. ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.