Wednesday, 18th September 2024

ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಿದ ಗಣ್ಯರು

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಕ್ರವಾರ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ತಮ್ಮ ಪ್ರಾಣ ಪಣಕ್ಕಿಟ್ಟು, ಉಗ್ರರ ವಿರುದ್ಧ ಹೋರಾಡಿದ ಹಾಗೂ ಹುತಾತ್ಮರಾದ ಯೋಧರ ಧೈರ್ಯ-ಸಾಹಸಕ್ಕೆ ದೇಶ ಸದಾ ಕೃತಜ್ಞ ವಾಗಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಅಂದ ಹಾಗೆ, ಮುಂಬೈನಲ್ಲಿ ನಡೆದ ಉಗ್ರರ ದಾಳಿಗೆ ಇಂದು 13 ವರ್ಷ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಸಹ ಮುಂಬೈ ಮೇಲಿನ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಹುತಾತ್ಮ ಯೋಧರ ಭಾವಚಿತ್ರಗಳಿರುವ ಎರಡು ನಿಮಿಷದ ವಿಡಿಯೊವೊಂದನ್ನು ಅವರು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, 26/11 ಮುಂಬೈ ಭಯೋತ್ಪಾದಕ ದಾಳಿ ಘಟನೆಯ ಹೀರೊಗಳಿಗೆ ವಂದನೆಗಳು ಎಂದು ಹಿಂದಿಯಲ್ಲಿ ತಿಳಿಸಿದ್ದಾರೆ.

ಮುಂಬೈ ಮೇಲೆ 2008ರ ನವೆಂಬರ್ 26ರಂದು ನಡೆದ ಭಯೋತ್ಪಾದಕರ ದಾಳಿ ವೇಳೆ, ಉಗ್ರರ ವಿರುದ್ಧ ಹೋರಾಡಿ ಹುತಾತ್ಮ ರಾದವರಿಗೆ ಶುಕ್ರವಾರ ಗೌರವ ಸಲ್ಲಿಸಲಾಯಿತು.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹುತಾತ್ಮರಾದ ಪೊಲೀಸರು ಹಾಗೂ ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಿದರು. ಕೆಲ ಹುತಾ ತ್ಮರ ಕುಟುಂಬದ ಸದಸ್ಯರೂ ಶ್ರದ್ಧಾಂಜಲಿ ಸಲ್ಲಿಸಿದರು.

2008ರ ನ. 26ರಂದು ಲಷ್ಕರ್-ಎ-ತೈಯಬಾ ಸಂಘಟನೆ ಉಗ್ರರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ಗುಂಡಿನ ದಾಳಿ ನಡೆಸಿದ್ದರು. 18 ಜನ ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಈ ಘಟನೆಯಲ್ಲಿ ಮೃತಪಟ್ಟಿದ್ದರು.