ಶ್ರೀನಗರ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.
ರಾಜ್‌ಬಾಗ್‌ನ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ ಮುಫ್ತಿ ಅವರು, ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.
ಪ್ರಕರಣದ ವಿಚಾರಣೆಗಾಗಿ ದೆಹಲಿಗೆ ಬರುವಂತೆ ಅಧಿಕಾರಿಗಳು ಮೆಹಬೂಬಾ ಅವರಿಗೆ ನೋಟಿಸ್ ನೀಡಿದ್ದರು. ಆದರೆ, ಶ್ರೀನಗರದ ಕಚೇರಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಮುಫ್ತಿ ಅವರು ಮನವಿ ಸಲ್ಲಿಸಿದ್ದರು.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಗೃಹಬಂಧನದಲ್ಲಿದ್ದು ಬಿಡುಗಡೆಯಾಗಿರುವ ಮೆಹಬೂಬಾ ಮುಫ್ತಿ ಅವರಿಗೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಕಚೇರಿ ನೋಟಿಸ್ ನೀಡಿತ್ತು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ