Sunday, 15th December 2024

ಬೆಂಗಳೂರಿನಲ್ಲಿ ನೂರರ ಗಡಿಯಲ್ಲಿ ಪೆಟ್ರೋಲ್ ದರ… ಎಷ್ಟು ?

ನವದೆಹಲಿ: ದೇಶದಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 26 ಪೈಸೆ ಮತ್ತು ಡೀಸೆಲ್ ದರ 14 ಪೈಸೆಯಷ್ಟು ಏರಿಕೆಯಾಗಿದೆ.

ಬುಧವಾರ ದೇಶಾದ್ಯಂತ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ದೇಶದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಐಓಸಿ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 26 ರಿಂದ 28 ಮತ್ತು ಡೀಸೆಲ್ ದರ 14 ರಿಂದ 18 ಪೈಸೆಯವರೆಗೂ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.95 ರೂಕ್ಕೆ ಏರಿಕೆಯಾಗಿದ್ದು, ಲೀಟರ್ ಡೀಸೆಲ್ ದರ 92.72ರೂ ಗೆ ಏರಿಕೆ ಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ 96.72ಕ್ಕೆ, ಡೀಸೆಲ್ ದರ 87.46ರೂ ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 102.88ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.89ರೂ ಗೆ ಏರಿಕೆಯಾಗಿದೆ.