ಮುಂಬೈ: ಕಾಮದ ವಾಂಛೆ ಇರುವವರಿಗೆ ಯಾವುದೇ ನಾಚಿಕೆ ಇರುವುದಿಲ್ಲವಂತೆ. ಇದಕ್ಕೆ ನಿದರ್ಶನವೆಂಬಂತೆ ಮುಂಬೈನ ಮುಲುಂಡ್‍ನಲ್ಲಿ ಇಂತದ್ದೊಂದು ಪ್ರಕರಣ ನಡೆದಿದೆ. ಅಪ್ರಾಪ್ತ ಬಾಲಕಿಗೆ ಐವತ್ತು ರೂಪಾಯಿ ಆಮಿಷವೊಡ್ಡಿ ಅವಳ ಮೇಲೆ ಅತ್ಯಾಚಾರವೆಸಗಿ( Physical Abuse) ಗರ್ಭಿಣಿ ಮಾಡಿದ ಮೂವರು ಆರೋಪಿಗಳನ್ನು ಮುಲುಂಡ್ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಸಿಯಾನ್ ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಮಾಹಿತಿಯ ಪ್ರಕಾರ, 13 ವರ್ಷದ ಬಾಲಕಿಗೆ ಐವತ್ತು ರೂಪಾಯಿಯ ಆಮಿಷವೊಡ್ಡಿ ಕಾಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸೆದಿದ್ದಾರಂತೆ. ವೈದ್ಯಕೀಯ ಪರೀಕ್ಷೆಯ ನಂತರ, ಬಾಲಕಿ ಗರ್ಭಿಣಿ ಎಂದು ತಿಳಿದುಬಂದಿದೆ. ಪೊಲೀಸರು ಲೈಂಗಿಕ ಶೋಷಣೆಯ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ತಲೆಮರೆಸಿಕೊಂಡಿರುವ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಾಲಕಿ ಹೊಟ್ಟೆ ನೋವು ಎಂದಾಗ ಏನೋ ತಿಂದು ಹೀಗಾಗಿರಬಹುದು ಎಂದು ಆಕೆಯ ಕುಟುಂಬ ಸದಸ್ಯರು ಆರಂಭದಲ್ಲಿ ಈ ವಿಷಯವನ್ನು ನಿರ್ಲಕ್ಷಿಸಿದ್ದಾರೆ. ಆಕೆಯ ನೋವು ಹೆಚ್ಚಾದಾಗ, ಅವಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವಳು ಏಳು ತಿಂಗಳ ಗರ್ಭಿಣಿ ಎಂದು ಬಹಿರಂಗಪಡಿಸಿದ್ದಾರೆ.
ಘಟನೆಯ ಬಗ್ಗೆ ಯಾರಿಗೂ ತಿಳಿಸದಂತೆ ಆರೋಪಿಗಳು ಬೆದರಿಕೆ ಹಾಕಿದ್ದರು ಬಾಲಕಿ ತಿಳಿಸಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿಗಳ ಹೆಚ್ಚಿನ ತನಿಖೆಯ ನಂತರ, ಅಪ್ರಾಪ್ತ ಬಾಲಕಿ ಮುಲುಂಡ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮೂವರು ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಿದ್ದಾಳೆ.
ಆಕೆಯ ಹೇಳಿಕೆಯನ್ನು ದಾಖಲಿಸಿದ ನಂತರ, ಪೊಲೀಸರು ಮೂವರನ್ನು ಪತ್ತೆ ಹಚ್ಚಿದ್ದಾರೆ. 50 ವರ್ಷದ ವ್ಯಕ್ತಿ ಮತ್ತು ಮೂವತ್ತರ ಹರೆಯದ ಇಬ್ಬರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು. ಇವರು ಎಂಟು ತಿಂಗಳ ಅವಧಿಯಲ್ಲಿ ಬಾಲಕಿಯ ಮೇಲೆ ಪ್ರತ್ಯೇಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮುಲುಂಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ಇದನ್ನೂ ಓದಿ: ಹೆಂಡತಿಯನ್ನು ಅದಲು ಬದಲು ಮಾಡಿಕೊಂಡು ಹೋಟೆಲ್‌ನಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಭೂಪರು! ವಿಡಿಯೊ ನೋಡಿ
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ, 2012ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅತ್ಯಾಚಾರದ ಆರೋಪ ಹೊರಿಸಲಾಗಿದೆ. ಈ ಸಂಬಂಧ ಮುಲುಂಡ್ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.