ಲಖನೌ: 75 ವರ್ಷದ ಅಜ್ಜಿಯ ಮೇಲೆ 25 ವರ್ಷದ ಮೊಮ್ಮಗ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ(Uttar Pradesh)ದ ಶಹಜಹಾನ್ಪುರ(Shahjahanpur)ದಲ್ಲಿ ನಡೆದಿದೆ. ಆರೋಪಿಯನ್ನು ಅಖಿಲೇಶ್ ಕುಮಾರ್ ಎಂದು ಗುರುತಿಸಲಾಗಿದೆ (Physical Abuse).
ಖತುರ್ ಎಂಬಲ್ಲಿ ಈ ವಿಲಕ್ಷಣ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆತ ಬೆದರಿಕೆಯನ್ನೂ ಹಾಕಿದ್ದನಂತೆ.
ಆರೋಪಿ ಅಖಿಲೇಶ್ ಅಜ್ಜಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಶಹಜಹಾನ್ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಎಂ.ಕೆ.ಅವಸ್ಥಿ ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ ದೂರು ದಾಖಲಿಸಲಾಗಿದೆ. ಸದ್ಯ ತಲೆ ಮರೆಸಿಕೊಂಡಿರುವ ಅಖಿಲೇಶ್ನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಲೈಂಗಿಕ ದೌರ್ಜನ್ಯವನ್ನು ವಿರೋಧಿಸಲು ಪ್ರಯತ್ನಿಸಿದಾಗ ಆರೋಪಿ ತನ್ನ 75 ವರ್ಷದ ಅಜ್ಜಿಯನ್ನು ಥಳಿಸಿದ್ದಾನೆ ಎಂದೂ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.
ಜಾರ್ಖಂಡ್ನಲ್ಲಿಯೂ ಆಘಾತಕಾರಿ ಘಟನೆ
ರಾಂಚಿ: ಇದೇ ಮಾದರಿಯ ಘಟನೆ ಜಾರ್ಖಂಡ್ನಲ್ಲಿ ಕೆಲವು ದಿನಗಳ ಹಿಂದೆ ನಡೆದಿತ್ತು. ದುಮ್ಕಾ ಜಿಲ್ಲೆಯ ಟೋಂಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 25 ವರ್ಷದ ಯುವಕ 70 ವರ್ಷದ ತನ್ನ ಅಜ್ಜಿಯ ಮೇಲೆ ಅತ್ಯಾಚಾರ ಎಸಗಿದ್ದ. ದುಮ್ಕಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೈಕಲ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದ ಆರೋಪಿ ಅಜ್ಜಿ ಮನೆಗೆ ಹೋಗಿದ್ದ. ಈ ಸಂದರ್ಭದಲ್ಲಿ ಮನೆಯಲ್ಲಿ ಅಜ್ಜಿ ಒಬ್ಬಳೇ ಇರುವುದನ್ನು ಗಮನಿಸಿದ ಆತ ಅವರ ಮೇಲೆ ಎರಗಿದ್ದ. ಕೆಲ ಹೊತ್ತಲ್ಲೇ ಕುಟುಂಬಸ್ಥರಿಗೆ ವಿಷಯ ಗೊತ್ತಾಗಿತ್ತು. ಚಿಂತಾಜನಕ ಸ್ಥಿತಿ ತಲುಪಿದ್ದ ವೃದ್ಧೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.
ಈ ಸುದ್ದಿಯನ್ನೂ ಓದಿ: Physical Abuse: ಪೈಶಾಚಿಕ ಕೃತ್ಯ; ಪಿಕ್ನಿಕ್ಗೆಂದು ಬಂದ ನವವಿವಾಹಿತೆಯ ಮೇಲೆ ಪತಿಯ ಎದುರೇ ಸಾಮೂಹಿಕ ಅತ್ಯಾಚಾರ