Thursday, 21st November 2024

Physical Abuse: ಶಿಕ್ಷಕಿಯ ಅಶ್ಲೀಲ ವಿಡಿಯೋ ವೈರಲ್‌ ಮಾಡಿದ ದುರುಳ ವಿದ್ಯಾರ್ಥಿಗಳ ಬಂಧನ

Physical Abuse

ಆಗ್ರಾ: ಶಿಕ್ಷಕಿಯೊಬ್ಬರ ಅಶ್ಲೀಲ ವಿಡಿಯೋ (Physical Abuse) ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ (viral video) ಮಾಡಿರುವ ನಾಲ್ವರು ವಿದ್ಯಾರ್ಥಿಗಳನ್ನು (students arrested) ಬಂಧಿಸಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ (agra) ನಡೆದಿದೆ. ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಥುರಾದ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿ 10ನೇ ತರಗತಿ ಮಕ್ಕಳಿಗೆ ಹೆಚ್ಚುವರಿ ಪಾಠ ಹೇಳುತ್ತಿದ್ದರು. ವಿದ್ಯಾಭ್ಯಾಸದಲ್ಲಿ ಹಿಂದಿದ್ದ ಆಗ್ರಾದ ವಿದ್ಯಾರ್ಥಿಯೊಬ್ಬ ಶಿಕ್ಷಕಿಯೊಂದಿಗೆ ನಿಕಟ ಸಂಬಂಧವನ್ನು ಬೆಳೆಸಿಕೊಂಡು ಆಕೆಯ ಅಶ್ಲೀಲ ವಿಡಿಯೋವನ್ನು ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ.

ಬಳಿಕ ಈ ವಿಡಿಯೋವನ್ನು ಬಳಸಿ ತನ್ನೊಂದಿಗೆ ಶಾರೀರಿಕ ಸಂಬಂಧ ಮುಂದುವರಿಸುವಂತೆ ಶಿಕ್ಷಕಿಗೆ ಬೆದರಿಕೆ ಹಾಕಲು ಪ್ರಾರಂಭಿಸಿದ. ಶಿಕ್ಷಕಿಯು ಆತನಿಂದ ದೂರವಾಗಲು ಪ್ರಯತ್ನಿಸಿದ್ದು, ಆತನ ಸಂಖ್ಯೆಯನ್ನು ತನ್ನ ಮೊಬೈಲ್‌ನಲ್ಲಿ ನಿರ್ಬಂಧಿಸಿದ್ದರು. ಆದರೆ ಇದರಿಂದ ಕುಪಿತನಾದ ವಿದ್ಯಾರ್ಥಿಯು ಈ ವಿಡಿಯೋವನ್ನು ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದು, ಇದು ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಮತ್ತು ಇನ್ ಸ್ಟಾಗ್ರಾಮ್‌ನಲ್ಲಿ ಇದನ್ನು ಹಂಚಿಕೊಳ್ಳಲಾಗಿತ್ತು.

ಇದರಿಂದ ಶಿಕ್ಷಕಿ ಮಾನಸಿಕವಾಗಿ ಕುಗ್ಗಿ ಹೋಗಿದ್ದು, ಆತ್ಮಹತ್ಯೆ ಯೋಚನೆಯನ್ನೂ ಮಾಡಿದ್ದರು. ಕೊನೆಗೆ ಮಿಷನ್ ಶಕ್ತಿ ಅಭಿಯಾನ ಕೇಂದ್ರದ ಸಹಾಯ ಪಡೆದು ಪೊಲೀಸರಿಗೆ ದೂರು ನೀಡಿದ್ದಾರೆ.

ನಾಲ್ವರ ಬಂಧನ

ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಆಗ್ರಾ ಉಪ ಪೊಲೀಸ್ ಆಯುಕ್ತ ಸೂರಜ್ ರೈ ತಿಳಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ವೈರಲ್ ಆಗಿರುವ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ ಎಂದು ಅವರು ಹೇಳಿದರು.

Physical Abuse: ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಿದ ವ್ಯಕ್ತಿಗೆ ಬಿತ್ತು ಗೂಸಾ; ವಿಡಿಯೊ ವೈರಲ್

ಶಿಕ್ಷಕಿಯ ಗುರುತನ್ನು ಮರೆಮಾಚಲಾಗಿದ್ದು, ಈ ಮೂಲಕ ಅವರಿಗೆ ರಕ್ಷಣೆ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಪ್ಪಿತಸ್ಥರು ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಆರೋಪಿಗಳಲ್ಲಿ ಇಬ್ಬರು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಾಗಿದ್ದು, ಅವರ ವಿರುದ್ಧ ಮತ್ತೊಂದು ಅಶ್ಲೀಲ ಚಿತ್ರ ರೆಕಾರ್ಡಿಂಗ್ ಕೇಸ್ ದಾಖಲಿಸಲಾಗಿದೆ.

ಶಿಕ್ಷಕಿಯ ವಿಡಿಯೋ ಚಿತ್ರೀಕರಣದಲ್ಲಿ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆಯನ್ನು ಪ್ರಯೋಗಿಸಿದ್ದಾರೆ ಎನ್ನಲಾಗಿದೆ.