ಭೂಪಾಲ್: ಅಪ್ಪ-ಅಮ್ಮನ ಜತೆ ಸೇರಿಕೊಂಡು ವ್ಯಕ್ತಿಯೊಬ್ಬ ತನ್ನ ಪತ್ನಿಯ ಗುಪ್ತಾಂಗವನ್ನು ಬಿಸಿ ಕಬ್ಬಿಣದ ರಾಡ್‌ನಿಂದ ಸುಟ್ಟುಹಾಕಿ ನಂತರ ಮೆಣಸಿನ ಪುಡಿಯನ್ನು ಹಚ್ಚಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ. ರಾಜ್ಗಢದಲ್ಲಿರುವ ತಮ್ಮ ಮನೆಯಲ್ಲಿ ಆಕೆಯನ್ನು ಇನ್ನೊಬ್ಬರ ಜತೆ ನೋಡಿದ್ದಾಗಿ ಹೇಳಿರುವ ಅತ್ತೆ ಮಾವ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ. ಈ ಸಂಬಂಧ ಅತ್ತೆ, ಮಾವನ ಮೇಲೆ ಕೇಸ್ ದಾಖಲಿಸಲಾಗಿದೆ. (Physical Abuse)
ದೂರಿನ ಪ್ರಕಾರ ಪತಿ, ಅತ್ತಿಗೆ, ಅತ್ತೆ ಮತ್ತು ಮಾವ ಎರಡು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. ಆಕೆಯನ್ನು ಬೆತ್ತಲು ಮಾಡಿ ಆಕೆಯ ಗುಪ್ತಾಂಗಕ್ಕೆ ಖಾರದಪುಡಿ ಹಾಕಿದ್ದರು. ಡಿಸೆಂಬರ್ 13 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತೆಯ ಖಾಸಗಿ ಭಾಗಗಳು, ತೊಡೆಗಳು ಮತ್ತು ದೇಹದ ಇತರ ಭಾಗಗಳಿಗೆ ಅತ್ತೆ ಕಾದ ಕಬ್ಬಿಣದ ರಾಡ್‌ನಿಂದ ಸುಟ್ಟಿದ್ದಾರೆ. ಮಾವ ಆಕೆಯ ಖಾಸಗಿ ಭಾಗಗಳಿಗೆ ಮೆಣಸಿನ ಪುಡಿಯನ್ನು ಹಾಕಿದ್ದಾರೆ. ಪತಿ ಮತ್ತು ಮಾವ ಸಂತ್ರಸ್ತೆಯನ್ನು ಬೈಕ್‌ನಲ್ಲಿ ಕರೆದೊಯ್ದು ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದಾಗ್ಯೂ, ಮಹಿಳೆ ತನ್ನ ಪೋಷಕರ ಮನೆಗೆ ತಲುಪುವಲ್ಲಿ ಯಶಸ್ವಿಯಾಗಿದ್ದಾಳೆ. ನಂತರ ತನ್ನ ಪೋಷಕರಿಗೆ ನಡೆದ ಘಟನೆಯ ಬಗ್ಗೆ ವಿವರಿಸಿದ್ದಳು. ಬಳಿಕ ಆಕೆಯ ಕುಟುಂಬಸ್ಥರು ಪೊಲೀಸರಿಗೆ ದೂರನ್ನು ನೀಡಿದ್ದಾರೆ. ದೂರಿನ ಪ್ರಕಾರ, ರೋಹಿತ್ ರುಹೇಲಾ ಎಂಬ ವ್ಯಕ್ತಿ ಮಹಿಳೆಯ ಮನೆಗೆ ಬಂದು ಸ್ಟೀಮ್ ಯಂತ್ರವನ್ನು ಕೇಳಿದ್ದಾನೆ. ಸಂತ್ರಸ್ತೆ ಗೇಟ್ ಬಳಿ ಕಾಯಲು ಹೇಳಿದಾಗ, ಅವನು ಬಾಗಿಲು ಮುಚ್ಚಿ, ಅವಳ ಕೋಣೆಗೆ ಪ್ರವೇಶಿಸಿ ಕಿರುಕುಳ ನೀಡಲು ಪ್ರಯತ್ನಿಸಿದ್ದ. ಈ ವೇಳೆ ಆಕೆಯ ಅತ್ತಿಗೆ ಕೊಠಡಿ ಪ್ರವೇಶಿಸಿದ್ದು, ಆರೋಪಿ ಪರಾರಿಯಾಗಿದ್ದಾನೆ.
ಘಟನೆಯನ್ನು ನೋಡಿದ ಅತ್ತಿಗೆ ನನ್ನನ್ನು ದೂಷಿಸಿದ್ದಾಳೆ. ನಂತರ ಆಕೆ ಅತ್ತೆ ಮಾವನಿಗೆ ವಿಷಯ ತಿಳಿಸಿದ್ದಾಳೆ. ಮೂವರೂ ಚಳಿ ರಾತ್ರಿಯಲ್ಲಿ ನನ್ನನ್ನು ವಿವಸ್ತ್ರಗೊಳಿಸಿ ನನ್ನ ಮೇಳೆ ಹಲ್ಲೆ ಮಾಡಿದ್ದಾರೆ. ನಂತರ ನಾನು ಪ್ರಜ್ಞಾಹೀನಳಾದೆ. ಮರುದಿನ ಬೆಳ್ಳಗ್ಗೆ ಅವರು ನನ್ನನ್ನು ಮತ್ತೆ ಹೊಡೆದರು. ನನ್ನನ್ನು ವಿವಸ್ತ್ರಗೊಳಿಸುವಾಗ, ನನ್ನ ಮಾವ ತನ್ನ ಕೈಯಿಂದ ನನ್ನ ಖಾಸಗಿ ಭಾಗಗಳಿಗೆ ಮೆಣಸಿನ ಪುಡಿಯನ್ನು ಹಚ್ಚಿದರು, ಮತ್ತು ನನ್ನ ಅತ್ತೆ ನನ್ನ ತೊಡೆಗಳು ಸೇರಿದಂತೆ ಅನೇಕ ಭಾಗಗಳನ್ನು ಬಿಸಿ ಕಬ್ಬಿಣದ ರಾಡ್‌ನಿಂದ ಸುಟ್ಟುಹಾಕಿದರು, ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಇದೀಗ ಕುಟುಂಬಸ್ಥರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ : Harassment Case: ತಿಂಗಳಿಗೆ 1.5 ಲಕ್ಷ ರೂ. ಮೈಂಟೇನೆನ್ಸ್, 1 ಕೋಟಿ ರೂ. ಪರಿಹಾರ… ಪತ್ನಿ ಕಿರುಕುಳಕ್ಕೆ ಬೇಸತ್ತ ಯುಎಕ್ಸ್ ಡಿಸೈನರ್