ಪುಣೆ: ಚಲಿಸುತ್ತಿರುವ ಬಸ್‌ನಲ್ಲಿ ಇಬ್ಬರು ಬಾಲಕಿಯರ ಮೇಲೆ 45ವರ್ಷ ಕಿಡಿಗೇಡಿ ಚಾಲಕ ದೌರ್ಜನ್ಯ(Physical Abuse) ಎಸಗಿರುವ ಹೀನ ಕೃತ್ಯ ಪುಣೆಯಲ್ಲಿ ನಡೆದಿದೆ. ವಾನ್‌ವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಏನಿದು ಘಟನೆ?
ಸೆ.30ರಂದು ಈ ಘಟನೆ ನಡೆದಿದ್ದು, ಖ್ಯಾತ ಶಿಕ್ಷಣ ಸಂಸ್ಥೆಯ ಸ್ಕೂಲ್ ಬಸ್ ಚಾಲಕ ಈ ಹೀನ ಕೃತ್ಯ ಎಸಗಿದ್ದಾನೆ. ಸಂತ್ರಸ್ತ ಬಾಲಕಿಯರು ಬಸ್‌ನಲ್ಲಿ ಎದುರು ಕುಳಿತಿದ್ದರು. ಈ ವೇಳೆ ಆತ ಅಸಭ್ಯವಾಗಿ ಮಕ್ಕಳ ಜತೆ ನಡೆದುಕೊಂಡಿದ್ದಾನೆ. ಅಹಸ್ಯ ರೀತಿಯಲ್ಲಿ ಸನ್ಹೆಗಳನ್ನು ಮಾಡುತ್ತಾ ಹೆಣ್ಣು ಮಕ್ಕಳಿಗೆ ಮುಜುಗರ ತರುವ ರೀತಿಯಲ್ಲಿ ವರ್ತಿಸಿದ್ದಾನೆ. ಅಲ್ಲದೇ ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ ಬೆದರಿಕೆವೊಡ್ಡಿದ್ದಾನೆ ಎನ್ನಲಾಗಿದೆ.
ಇನ್ನು ಮಕ್ಕಳು ಚಾಲಕನ ಈ ಕೃತ್ಯದ ಬಗ್ಗೆ ಪೋಷಕರಿಗೆ ತಿಳಿಸಿದ್ದು, ನಗರದಲ್ಲಿ ಜನ ಶಾಲೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಇನ್ನು ಮಹಾರಾಷ್ಟ್ರದ ಬದ್ಲಾಪುರದಲ್ಲಿ ಶಾಲೆಯೊಂದರಲ್ಲಿ ಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕೆಲವೇ ದಿನಗಳ ನಂತರ ಈ ಘಟನೆ ವರದಿಯಾಗಿದೆ.
ಮಹಾರಾಷ್ಟ್ರದ ಬದ್ಲಾಪುರ ಪ್ರದೇಶದ ಶಾಲೆಯೊಂದರಲ್ಲಿ ಇಬ್ಬರು ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲು ಸೇರಿದ್ದ ಅಕ್ಷಯ್ ಶಿಂಧೆ ಎಂಬ ವ್ಯಕ್ತಿಯನ್ನು ಪೊಲೀಸರು ಕೆಲವು ದಿನಗಳ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದ ಹಿನ್ನೆಲೆಯಲ್ಲಿಆತನನ್ನು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು.
ಪೊಲೀಸರ ಪ್ರಕಾರ, ಆರೋಪಿ ಶಿಂಧೆ ಸಂಜೆ 5.30 ರ ಸುಮಾರಿಗೆ ಜೈಲಿನಿಂದ ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಪೊಲೀಸರ ಆಯುಧವನ್ನು ಕಸಿದುಕೊಂಡು ಗುಂಡು ಗುಂಡು ಹಾರಿಸಿದ್ದ. ಈ ವೇಳೆ ಹಲವಾರು ಸುತ್ತು ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳು ಸಹ ಗಾಯಗೊಂಡಿದ್ದಾರೆ.
ತನಿಖೆಗಾಗಿ ತಲೋಜಾ ಜೈಲಿನಿಂದ ಬದ್ಲಾಪುರಕ್ಕೆ ಕರೆದೊಯ್ಯುತ್ತಿದ್ದ ಶಿಂಧೆ ಮೇಲೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ವರದಿಯಲ್ಲಿ ಹೇಳಲಾಗಿದೆ.
ಶಾಲಾ ಶೌಚಾಲಯದಲ್ಲಿ ನಾಲ್ಕು ಮತ್ತು ಐದು ವರ್ಷದ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಂಧೆಯನ್ನು ಆಗಸ್ಟ್ 17 ರಂದು ಬಂಧಿಸಲಾಗಿತ್ತು. ಈ ಪ್ರದೇಶದಲ್ಲಿ ನಡೆದ ಪ್ರತಿಭಟನೆಗಳ ನಡುವೆ ಈ ಘಟನೆಯು ಭಾರಿ ಆಕ್ರೋಶ ಹುಟ್ಟುಹಾಕಿತು. ಶಿಂಧೆ ಶಾಲೆಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಸ್ಥಳೀಯ ಪೊಲೀಸರು ಆರಂಭದಲ್ಲಿ ಪ್ರಕರಣದ ತನಿಖೆ ನಡೆಸುತ್ತಿದ್ದರು, ಆದರೆ ಪೊಲೀಸ್ ತನಿಖೆಯಲ್ಲಿ ಗಂಭೀರ ಲೋಪಗಳ ಬಗ್ಗೆ ಸಾರ್ವಜನಿಕ ಆಕ್ರೋಶದ ನಂತರ ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿತು.
ಈ ಸುದ್ದಿಯನ್ನೂ ಓದಿ: Police Firing: ಬದ್ಲಾಪುರ್ ಅತ್ಯಾಚಾರ ಆರೋಪಿಯ ಹತ್ಯೆ; ಯಾರಿವರು ಎನ್‌ಕೌಂಟರ್ ಸ್ಪೆಷಲಿಸ್ಟ್ ಸಂಜಯ್ ಶಿಂಧೆ?