Friday, 27th December 2024

Physical Assault: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ; ಉದಯ್‌ ನಿಧಿ ಸ್ಟಾಲಿನ್‌ ಜತೆ ಆರೋಪಿ ಫೋಟೊ! ಬಿಜೆಪಿ ಕಿಡಿ

ಚೆನ್ನೈ: ತಮಿಳುನಾಡಿನ(Tamil Nadu) ಅಣ್ಣಾ ವಿಶ್ವವಿದ್ಯಾನಿಲಯದ (Anna University) ಕ್ಯಾಂಪಸ್ ನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ(Engineering Student) ಮೇಲೆ ಇಬ್ಬರು ವ್ಯಕ್ತಿಗಳು ಬುಧವಾರ(ಡಿ.25) ಬೆಳಗ್ಗೆ ಅತ್ಯಾಚಾರವೆಸಗಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾವಿರಾರು ವಿದ್ಯಾರ್ಥಿಗಳು ಸಂತ್ರಸ್ತ ವಿದ್ಯಾರ್ಥಿನಿಗೆ ನ್ಯಾಯ ಬೇಕೆಂದು ಪ್ರತಿಭಟನೆ ನಡೆಸಿದರು. ಪ್ರತಿಪಕ್ಷಗಳು ಮುಖ್ಯಮಂತ್ರಿ ಸ್ಟಾಲಿನ್‌ ಮೇಲೆ ಮುಗಿಬಿದ್ದವು(Physical Assault).ಈ ಮಧ್ಯೆ ಅತ್ಯಾಚಾರ ಆರೋಪಿಯಾದ ಜ್ಞಾನಶೇಖರನ್ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್(Udayanidhi Stalin) ಜೊತೆ ಇರುವ ಫೋಟೊ ಸಾಕಷ್ಟು ವೈರಲ್‌ ಆಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ(K Annamalai) ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ಫೋಟೊ ಹಂಚಿಕೊಂಡಿದ್ದು ‘ಡಿಎಂಕೆ ಕಾರ್ಯಕಾರಿಣಿ ಸದಸ್ಯ’ ಎಂದು ಆರೋಪಿಸಿದ್ದಾರೆ. ಚೆನ್ನೈನ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾನಿಲಯದ 19 ವರ್ಷದ ವಿದ್ಯಾರ್ಥಿನಿಯ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಯನ್ನು” ಡಿಎಂಕೆ ಕಾರ್ಯಕರ್ತ” ಎಂದು ಭಾರತೀಯ ಜನತಾ ಪಾರ್ಟಿ ಆರೋಪಿಸಿದೆ. ಆದರೆ ಆರೋಪವನ್ನು ಡಿಎಂಕೆ ನಾಯಕರು ತಳ್ಳಿ ಹಾಕಿದ್ದಾರೆ.

ಆರೋಪಿಯು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ಗೆ ಪ್ರವೇಶಿಸಿದ್ದು, ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ನಂತರ ಅವಳನ್ನು ಪೊದೆಯೊಂದಕ್ಕೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿತ್ತು. ಹೆಸರಾಂತ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಇಂತಹ ಹೀನ ಕೃತ್ಯ ನಡೆದಿರುವುದರಿಂದ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರಕರಣವು ರಾಜಕೀಯ ಒಳ ಜಗಳಕ್ಕೂ ಕಾರಣವಾಗಿದೆ. ಇನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ 37 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಯನ್ನು ಕ್ಯಾಂಪಸ್ ರಸ್ತೆಬದಿಯ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್ ಎಂದು ಗುರುತಿಸಲಾಗಿದೆ.

ಆಕ್ರೋಶ ಹೊರ ಹಾಕಿದ ಪ್ರತಿಪಕ್ಷಗಳು

ಅತ್ಯಾಚಾರ ಘಟನೆಯ ಬಗ್ಗೆ ಪ್ರತಿಪಕ್ಷಗಳ ನಾಯಕರು ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ(K. Annamalai) ನಿನ್ನೆ ಪ್ರತಿಕ್ರಿಯೆ ನೀಡಿದ್ದರು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದರು. “ಡಿಎಂಕೆ ಸರ್ಕಾರದಡಿ ತಮಿಳುನಾಡು ಕಾನೂನುಬಾಹಿರ ಚಟುವಟಿಕೆಗಳ ತಾಣವಾಗಿದೆ ಮತ್ತು ಅಪರಾಧಿಗಳ ಆಶ್ರಯ ತಾಣವಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗುತ್ತದೆ, ಯಾಕೆಂದರೆ ರಾಜ್ಯ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಆರೋಪಿಸಿದ್ದರು. ಪ್ರತಿಪಕ್ಷ ನಾಯಕ ಎಡಪ್ಪಾಡಿ ಕೆ.ಪಳನಿಸ್ವಾಮಿ ಕೂಡ ಘಟನೆ ಕುರಿತು ಪ್ರತಿಕ್ರಿಯೆ ನೀಡಿ, ನಾಚಿಕೆಗೇಡಿನ ಸಂಗತಿ ಎಂದಿದ್ದರು. ತಮಿಳುನಾಡಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸಾಧ್ಯವಾಗಲಿಲ್ಲ” ಎಂದು ಅವರು ಟೀಕಿಸಿದ್ದರು.

ಈ ಸುದ್ದಿಯನ್ನೂ ಓದಿ:Viral News: ಬರೋಬ್ಬರಿ 12 ಹೆಂಡತಿಯರು, 102 ಮಕ್ಕಳು… 578 ಮೊಮ್ಮಕ್ಕಳು- ಈತನ ಕಥೆ ಕೇಳಿದ್ರೆ ಶಾಕ್‌ ಆಗ್ತೀರಾ!