Friday, 22nd November 2024

Pinarayi Vijayan: ಕೇರಳ ಸಿಎಂ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಬೆಂಗಾವಲು ವಾಹನಗಳೂ ಸರಣಿ ಡಿಕ್ಕಿ

Pinarayi Vijayan

ತಿರುವನಂತಪುರ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದೆ. ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ತಿರುವನಂತಪುರದಲ್ಲಿ ಈ ಘಟನೆ ನಡೆದಿದ್ದು, ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮವಾಗಿ ಅವರ ಬೆಂಗಾವಲು ಕಾರುಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ. ಎಂದು ವರದಿಯಾಗಿದೆ.

ಇನ್ನು ಈ ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ನಿನ್ನೆ ಸಂಜೆ ದ್ವಿಚಕ್ರ ವಾಹನ ಚಾಲಕನನ್ನು ರಕ್ಷಿಸಲು ಪೈಲಟ್ ಕಾರು ಏಕಾಏಕಿ ನಿಲ್ಲಿಸಿದಾಗ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದವು. ಮುಖ್ಯಮಂತ್ರಿಯವರ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ ಆದರೆ ಅಪಘಾತದಲ್ಲಿ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಿರುವನಂತಪುರಂನ ವಾಮನಪುರಂನಲ್ಲಿ ವಿಜಯನ್ ಇಲ್ಲಿಂದ ಸುಮಾರು 150 ಕಿಮೀ ದೂರದಲ್ಲಿರುವ ಕೊಟ್ಟಾಯಂಗೆ ಭೇಟಿ ನೀಡಿದ ನಂತರ ರಾಜ್ಯ ರಾಜಧಾನಿಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಿಎಂ ಜೊತೆಗೆ ಚಲಿಸುತ್ತಿದ್ದ ಸುಮಾರು ಏಳು ಬೆಂಗಾವಲು ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿರುವ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಕೂಡ ಆಗಿದೆ. ಮಹಿಳೆಯೊಬ್ಬರು ಈ ಬೆಂಗಾವಲು ವಾಹನಗಳು ಬಂದಾಗಲೇ ರಸ್ತೆಯಲ್ಲಿ ದಿಢೀರನೆ ಬಲಕ್ಕೆ ತಿರುಗಿಸಿದ್ದಾರೆ. ಹಾಗಾಗಿ ಮುಂದೆ ಹೋಗುತ್ತಿದ್ದ ಭದ್ರತಾ ವಾಹನಗಳು ಬ್ರೇಕ್‌ ಹೊಡೆದಿವೆ.

ಈ ವೇಳೆ ಹಿಂದೆಯೇ ವೇಗವಾಗಿ ಬರುತ್ತಿದ್ದ ಸಿಎಂ ವಾಹನ ಸೇರಿದಂತೆ ಕೊನೆಯ ಆಂಬುಲೆನ್ಸ್‌ ಕೂಡ ಏಳು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ. ಅದೃಷ್ಟವಶಾತ್‌ ಸಿಎಂ ಪಿಣರಾಯಿ ವಿಜಯನ್‌ ಅವರು ಕ್ಷೇಮವಾಗಿದ್ದಾರೆ ಎನ್ನಲಾಗಿದೆ. ಇನ್ನು ಸರಣಿ ಅಪಘಾತದಿಂದ ವಾಹನಗಳೆಲ್ಲ ನಜ್ಜುಗುಜ್ಜಾಗಿವೆ.

ಈ ಸುದ್ದಿಯನ್ನೂ ಓದಿ: PM Narendra Modi: ಕಾರಿನಿಂದ ಇಳಿದು ಬಂದು ವ್ಹೀಲ್​ಚೇರ್​ನಲ್ಲಿದ್ದ ವಿಶೇಷ ಚೇತನ ಮಹಿಳೆ ಜತೆ ಮಾತನಾಡಿದ ಪ್ರಧಾನಿ ಮೋದಿ; ಇಲ್ಲಿದೆ ವಿಡಿಯೋ