Friday, 13th December 2024

ಫ್ಲಾಟ್ ಫಾರಂ ಟಿಕೆಟ್ ದರ ಹೆಚ್ಚಳ: ಇಂದಿನಿಂದಲೇ ಜಾರಿ

ಮುಂಬೈ: ಸೆಂಟ್ರಲ್ ರೈಲ್ವೆ, ಮಹಾರಾಷ್ಟ್ರದ ಆರು ನಿಲ್ದಾಣಗಳ ಫ್ಲಾಟ್ ಫಾರಂ ಟಿಕೆಟ್ ದರ 10 ರೂಪಾಯಿಗಳಿಂದ 50 ರೂಪಾಯಿಗಳಿಗೆ ಏರಿಕೆಯಾಗಿದೆ. ನೂತನ ದರ ಶನಿವಾರದಿಂದಲೇ ಜಾರಿಗೆ ಬಂದಿದ್ದು, ಅ.31ರವರೆಗೆ ಅನ್ವಯಿಸಲಿದೆ.

ದೀಪಾವಳಿ ಹಬ್ಬದ ಸಂದರ್ಭ ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತಿರುವ ಕಾರಣ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸೆಂಟ್ರಲ್ ರೈಲ್ವೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ದಾದರ್, ಲೋಕಮಾನ್ಯ ತಿಲಕ್ ಟರ್ಮಿನಸ್, ಥಾಣೆ, ಕಲ್ಯಾಣ್ ಹಾಗೂ ಪನ್ವೆಲ್ ರೈಲು ನಿಲ್ದಾಣಗಳಲ್ಲಿ ನೂತನ ದರ ತಾತ್ಕಾಲಿಕವಾಗಿ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.