ನವದೆಹಲಿ: ಎಲ್ಲಾ ರಾಜ್ಯ ಮಂಡಳಿಗಳು, ಸಿಬಿಎಸ್ಇ, ಐಸಿಎಸ್ಇ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಮೂಲಕ ನಡೆಸ ಲಾಗುವ ಹತ್ತು ಮತ್ತು ೧೨ ತರಗತಿಗಳ ಆಫ್ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಗೊಳಿಸಿದೆ .
ಮೇಲ್ಮನವಿ ತಿರಸ್ಕರಿಸಿದ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇತೃತ್ವದ ಪೀಠವು, ಅರ್ಜಿಯು ‘ಸುಳ್ಳು ಭರವಸೆ’ ಮತ್ತು ‘ಗೊಂದಲ’ವನ್ನು ಸೃಷ್ಟಿಸುತ್ತದೆ . ‘ಇದು ಸುಳ್ಳು ಭರವಸೆಗಳನ್ನು ಮಾತ್ರ ಸೃಷ್ಟಿಸುತ್ತದೆ, ಇದು ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಗೊಂದಲವನ್ನು ಸೃಷ್ಟಿಸುತ್ತದೆ’ ಎಂದು ನ್ಯಾಯ ಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಮತ್ತು ಸಿ ಟಿ ರವಿಕುಮಾರ್ ಅವರನ್ನೊಳಗೊಂಡ ಪೀಠ ಹೇಳಿದೆ.