Sunday, 24th November 2024

ಪ್ರತಿಭಟನಾ ನಿರತ ರೈತರ ತೆರವಿಗೆ ಸುಪ್ರೀಂನಲ್ಲಿ ಅರ್ಜಿ: 16ರಂದು ವಿಚಾರಣೆ

ನವದೆಹಲಿ : ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೂಡಲೇ ತೆರವುಗೊಳಿಸು ವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಡಿ.16ರಂದು ಸುಪ್ರೀಂ ಕೋರ್ಟ್ ನಡೆಸಲಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ನ್ಯಾಯಮೂರ್ತಿ ವಿ.ರಾಮಸುಬ್ರಮಣಿಯನ್ ಅವರು ಕಾನೂನು ವಿದ್ಯಾರ್ಥಿ ರಿಷಬ್ ಶರ್ಮಾ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯ ಲಿದ್ದು, ರಸ್ತೆ ತಡೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಬಹುದು. ಹೀಗಾಗಿ ರೈತರ ಪ್ರತಿಭಟನೆ ಹಿಂಪಡೆಯುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.