Friday, 25th October 2024

ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮನವಿ

ನವದೆಹಲಿ: ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ದೇಶದ ವಿವಿಧ ಭಾಗಗಳಲ್ಲಿ ಉಪಚುನಾವಣೆ ನಡೆಯು ತ್ತಿದ್ದು, ಈ ಪ್ರದೇಶಗಳಲ್ಲಿನ ಜನರು ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಈ ಉತ್ಸವವನ್ನು ಮತ್ತಷ್ಟು ಬಲಪಡಿಸುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ 28, ಗುಜರಾತ್‌ನಲ್ಲಿ 8, ಉತ್ತರಪ್ರದೇಶದಲ್ಲಿ 7, ಒಡಿಶಾ, ನಾಗಾಲ್ಯಾಂಡ್, ಕರ್ನಾಟಕ ಮತ್ತು ಜಾರ್ಖಂಡ್‌ನಲ್ಲಿ ತಲಾ 2 ಮತ್ತು ಛತ್ತೀಸ್ಗಢ, ತೆಲಂಗಾಣ ಮತ್ತು ಹರಿಯಾಣದಲ್ಲಿ ತಲಾ ಒಂದು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ.

ಛತ್ತೀಸ್ಗಢ, ಜಾರ್ಖಾಂಡ್ ಮತ್ತು ನಾಗಾಲ್ಯಾಂಡ್ ನಲ್ಲಿ ಕೊರೋನಾ ಸೋಂಕು ತಗುಲಿದ ವ್ಯಕ್ತಿಗಳಿಗೆ ಕೊನೆಯ ಒಂದು ಗಂಟೆ ಗಳಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ.