ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ನಂತರ ಮತ ಎಣಿಕೆ ಕಾರ್ಯ ನಡೆಯಲಿದೆ. ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಅಭ್ಯರ್ಥಿ ಮತ್ತು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ (71) ಅವರು ಜಂಟಿ ವಿಪಕ್ಷದ ಅಭ್ಯರ್ಥಿ ಮಾರ್ಗ ರೇಟ್ ಆಳ್ವಾ (80) ವಿರುದ್ಧ ಕಣಕ್ಕಿಳಿದಿದ್ದಾರೆ.
ಆಡಳಿತಾರೂಢ ಬಿಜೆಪಿಯು ಲೋಕಸಭೆಯಲ್ಲಿ ಸಂಪೂರ್ಣ ಬಹುಮತವನ್ನು ಮತ್ತು ರಾಜ್ಯಸಭೆಯಲ್ಲಿ 91 ಸದಸ್ಯರನ್ನು ಹೊಂದಿದ್ದು, ಧನಕರ್ ಅವರು ತಮ್ಮ ಪ್ರತಿಸ್ಪರ್ಧಿಗಿಂತ ಸ್ಪಷ್ಟವಾದ ಅಂಚನ್ನು ಹೊಂದಿದ್ದಾರೆ. ಪ್ರಸ್ತುತ ಎಂ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆ.10 ರಂದು ಕೊನೆಗೊಳ್ಳ ಲಿದೆ.
ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸಂಸದರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.