ನವದೆಹಲಿ: ಕರೋನಾ ಮಾರಿಗೆ ಒಳಗಾಗಿ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಪಿಎಂ ಕೇರ್ಸ್ ವತಿಯಿಂದ ಉಚಿತ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ದೇಶದಲ್ಲಿ ಕರೋನಾದಿಂದ ಅನೇಕ ಮಕ್ಕಳು ಅನಾಥರಾಗಿದ್ದಾರೆ. ತಂದೆ-ತಾಯಿ ಯನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಕ್ಕಳು ದೇಶದ ಭವಿಷ್ಯ ಪ್ರತಿನಿಧಿಸುತ್ತಾರೆ. ಅವರ ರಕ್ಷಣೆ, ಉಜ್ವಲ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಮೋದಿ ಹೇಳಿದ್ದಾರೆ.
ಕರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಟ್ರನ್ ಯೋಜನೆಯಡಿ ಸೌಲಭ್ಯ ಕಲ್ಪಿಸ ಲಾಗುತ್ತದೆ. ಉಚಿತ ಶಿಕ್ಷಣ, ಪ್ರತಿ ತಿಂಗಳು ಆರ್ಥಿಕ ನೆರವು, ಆರೋಗ್ಯ ವಿಮೆ, ಮಕ್ಕಳ ಹೆಸರಲ್ಲಿ ಠೇವಣಿ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲಾಗುತ್ತದೆ.