ನವದೆಹಲಿ: ಈದ್-ಉಲ್-ಅಧಾವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ಈದ್-ಉಲ್-ಅಧಾದ ಶುಭಾಶಯಗಳು. ಸಾಮೂಹಿಕ ಅನುಭೂತಿ, ಸಾಮರಸ್ಯ ಮತ್ತು ಒಳ್ಳೆಯ ಸೇವೆಯಲ್ಲಿ ಸೇರ್ವಡಿಸುವಂತಹ ಮನೋಭಾವವನ್ನು ಹೆಚ್ಚಿಸಲಿ ಎಂದು ಹೇಳಿದ್ದಾರೆ
ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಬಕ್ರೀದ್ ಹಬ್ಬದ ವಿಶೇಷವಾಗಿ ದೇಶದ ಮುಸ್ಲಿಮರಿಗೆ ಉರ್ದು ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದು, ಜನರು ಕೊವಿಡ್ 19 ಸುರಕ್ಷತಾ ಮಾರ್ಗ ಸೂಚಿಗಳನ್ನು ಅನುಸರಿಸುವಂತೆ ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ, ತ್ಯಾಗ, ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬ ಸರ್ವರಿಗೂ ಮಂಗಳ ತರಲಿ. ಪರಸ್ಪರ ಸಹೋದರತೆ, ಐಕ್ಯತೆಯನ್ನು ಇನ್ನಷ್ಟು ಬಲಪಡಿಸಲಿ ಎಂದು ಅವರು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.