Friday, 12th April 2024

ಮುಸ್ಲಿಂ ಬಾಂಧವರಿಗೆ ಬಕ್ರೀದ್‌ ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂ‌ದ್

ನವದೆಹಲಿ: ಈದ್​-ಉಲ್​-ಅಧಾವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ಈದ್​-ಉಲ್​-ಅಧಾದ ಶುಭಾಶಯಗಳು. ಸಾಮೂಹಿಕ ಅನುಭೂತಿ, ಸಾಮರಸ್ಯ ಮತ್ತು ಒಳ್ಳೆಯ ಸೇವೆಯಲ್ಲಿ ಸೇರ್ವಡಿಸುವಂತಹ ಮನೋಭಾವವನ್ನು ಹೆಚ್ಚಿಸಲಿ ಎಂದು ಹೇಳಿದ್ದಾರೆ

ರಾಷ್ಟ್ರಪತಿ ರಾಮ ನಾಥ್​ ಕೋವಿಂದ್ ಬಕ್ರೀದ್​ ಹಬ್ಬದ ವಿಶೇಷವಾಗಿ ದೇಶದ ಮುಸ್ಲಿಮರಿಗೆ ಉರ್ದು ಭಾಷೆಯಲ್ಲಿ ಟ್ವೀಟ್​ ಮಾಡುವ ಮೂಲಕ ಶುಭಾಶಯ ಕೋರಿದ್ದು, ಜನರು ಕೊವಿಡ್​ 19 ಸುರಕ್ಷತಾ ಮಾರ್ಗ ಸೂಚಿಗಳನ್ನು ಅನುಸರಿಸುವಂತೆ ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ, ತ್ಯಾಗ, ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬ ಸರ್ವರಿಗೂ ಮಂಗಳ ತರಲಿ. ಪರಸ್ಪರ ಸಹೋದರತೆ, ಐಕ್ಯತೆಯನ್ನು ಇನ್ನಷ್ಟು ಬಲಪಡಿಸಲಿ ಎಂದು ಅವರು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!