Friday, 13th December 2024

ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ: ಪ್ರಧಾನಿ ಮೋದಿ, ’ಕೈ’ ನಾಯಕಿ ಪ್ರಿಯಾಂಕ ಗೌರವ ನಮನ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿ ದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ಗೌರವ ನಮನ ಸಲ್ಲಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಮ್ಮ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜಿ ಅವರ ಪುಣ್ಯ ತಿಥಿಯಂದು ನಮನಗಳು ಎಂದಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ದೆಹಲಿ ಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದರು.