Thursday, 12th December 2024

ಭಯೋತ್ಪಾದನಾ ದಾಳಿ: ವಿಯೆನ್ನಾಗೆ ಬೆಂಬಲ ಸೂಚಿಸಿದ ಪ್ರಧಾನಿ ಮೋದಿ

ನವದೆಹಲಿ: ವಿಯೆನ್ನಾದಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರಧಾನಮಂದ್ರಿ ನರೇಂದ್ರ ಮೋದಿಯವರು ಮಂಗಳವಾರ ಆಘಾತ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ, ಭೀಕರ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ ಮತ್ತು ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ.

”ವಿಯೆನ್ನಾದಲ್ಲಿನ ಭಯಾನಕ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಈ ದುರಂತ ಸಮಯದಲ್ಲಿ ಭಾರತ ಆಸ್ಟ್ರಿಯಾದೊಂದಿಗೆ ನಿಂತಿದೆ. ನನ್ನ ಆಲೋಚನೆಗಳು ಮೃತರು ಮತ್ತು ಅವರ ಕುಟುಂಬಗಳೊಂದಿಗೆ ಇವೆ.’ ಎಂದು ತಿಳಿಸಿದ್ದಾರೆ.