Friday, 22nd November 2024

ಸ್ಫೋಟ ದುರಂತ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿರುವ ಸ್ಫೋಟ ದುರಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕಾಗಿ ತಲಾ ಎರಡು ಲಕ್ಷ ರೂ.ಗಳ ಪರಿಹಾರ ನಿಧಿ ಘೋಷಿಸಿದ್ದಾರೆ.

ತಮಿಳುನಾಡಿನ ವಿರುಧುನಗರದಲ್ಲಿ ಸಂಭವಿಸಿದ ಘಟನೆಯು ಅತೀವ ದುಃಖಕರವಾಗಿದೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ನೆರವು ಮಾಡಲು ಅಧಿಕಾರಿಗಳು ಪರಿಶ್ರಮ ವಹಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿಕೆ ಟ್ವೀಟ್ ಮಾಡಿದೆ.

ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ಎರಡು ಲಕ್ಷ ರೂ.ಗಳನ್ನು ಘೋಷಿಸಲಾಗಿದೆ. ಗಂಭೀರ ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.