Saturday, 14th December 2024

ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಇಂದು ಮುಂಜಾನೆ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ನಿಧನರಾದರು. ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಅಹ್ಮದ್ ಪಟೇಲ್ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಾರ್ವಜನಿಕ ಜೀವನದಲ್ಲಿ ಅವರು ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರ ಸ್ಮರಣೀಯವಾಗಿದೆ. ಅಹ್ಮದ್ ಪಟೇಲ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

ಅಕ್ಟೋಬರ್ 1ರಂದು ಫರೀದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುಗ್ರಾಮದ ಮೇದಂತಾ ಮೆಡಿಸಿಟಿಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.