Thursday, 7th December 2023

ಕೋವಿಡ್-19, ಒಮೈಕ್ರಾನ್ ಆರ್ಭಟ: ಇಂದು ಸಂಜೆ ಸಿಎಂಗಳೊಂದಿಗೆ ಪ್ರಧಾನಿ ಸಭೆ

ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಅವರು ಕೋವಿಡ್-19 ಹಾಗೂ ಒಮೈಕ್ರಾನ್ ರೂಪಾಂತರದ ಪರಿಸ್ಥಿತಿ ಕುರಿತು ಗುರುವಾರ ಸಂಜೆ ವೀಡಿಯೊ ಕಾನ್ಫರೆ ನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ.

ಈ ವರ್ಷ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರು ಕರೋನಾ ಪರಿಸ್ಥಿತಿ ಕುರಿತು ನಡೆಸುತ್ತಿರುವ ಮೊದಲ ಸಭೆ ಇದಾಗಿದೆ. ಪ್ರಧಾನಿ ಮೋದಿ ಕಳೆದ ವರ್ಷ ಮುಖ್ಯಮಂತ್ರಿ ಗಳೊಂದಿಗೆ ಹಲವು ಸಭೆಗಳನ್ನು ನಡೆಸಿದ್ದಾರೆ.

 

ಮೋದಿ ಅವರು ಜ.9 ರಂದು ದೇಶದ ಕೋವಿಡ್-19 ಪರಿಸ್ಥಿತಿ ಪರಿಶೀಲಿಸಲು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಆ ಪರಿಶೀಲನಾ ಸಭೆಯಲ್ಲಿ, ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲಸೌಕರ್ಯಗಳನ್ನು ಖಚಿತಪಡಿಸಿಕೊಳ್ಳುವ ಅಗತ್ಯ ಮತ್ತು ನಿರ್ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ರಾಜ್ಯ-ನಿರ್ದಿಷ್ಟ ಸನ್ನಿವೇಶಗಳು, ಉತ್ತಮ ಅಭ್ಯಾಸಗಳು ಮತ್ತು ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯನ್ನು ಚರ್ಚಿಸಲು ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ಕರೆಯಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದರು.

ಕಳೆದ ಬುಧವಾರ NITI ಆಯೋಗ್ ಸದಸ್ಯ ಡಾ ವಿಕೆ ಪಾಲ್, ವೈರಸ್‌ನ ರೂಪಾಂತರಿ ಓಮಿಕ್ರಾನ್‌ನಿಂದ ಉಂಟಾಗುವ ಸೋಂಕನ್ನು ಸಾಮಾನ್ಯ ಶೀತ ಎಂದು ಪರಿಗಣಿಸಬಾರದು ಮತ್ತು ಜನರು ಅದನ್ನು ಲಘುವಾಗಿ ತೆಗೆದುಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ.

error: Content is protected !!