Wednesday, 11th December 2024

ಪುಲ್ವಾಮಾ ದಾಳಿಯ ಹುತಾತ್ಮರಾದವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಫೆಬ್ರವರಿ 2019 ರಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭಯೋ ತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

‘2019 ರ ಈ ದಿನದಂದು ಪುಲ್ವಾಮಾದಲ್ಲಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ ಮತ್ತು ನಮ್ಮ ದೇಶಕ್ಕೆ ಅವರ ಅತ್ಯುತ್ತಮ ಸೇವೆಯನ್ನು ಸ್ಮರಿಸಿಕೊಳ್ಳುತ್ತೇನೆ. ಅವರ ಶೌರ್ಯ ಮತ್ತು ಅತ್ಯುನ್ನತ ತ್ಯಾಗವು ಪ್ರತಿ ಭಾರತೀಯನನ್ನು ಬಲಿಷ್ಠ ಮತ್ತು ಸಮೃದ್ಧ ದೇಶಕ್ಕಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ, ‘ಎಂದು ಪ್ರಧಾನಿ ಹೇಳಿದರು.

ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ CRPF ಬೆಂಗಾವಲು ಪಡೆ ಮೇಲೆ ದಾಳಿ ನಡೆದಿತ್ತು. ಅಂದು ಪುಲ್ವಾಮಾ ಜಿಲ್ಲೆಯಲ್ಲಿ 22 ವರ್ಷದ ಆತ್ಮಹತ್ಯಾ ಬಾಂಬರ್ ಆದಿಲ್ ಅಹ್ಮದ್ ದಾರ್ 40 ಸಿಆರ್‌ಪಿಎಫ್ ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆದನು.

ಈ ಘಟನೆಯಲ್ಲಿ ಸ್ಥಳೀಯ ಕಾಶ್ಮೀರಿ ಯುವಕ ಆದಿಲ್ ಅಹ್ಮದ್ ದಾರ್ ಎಂಬಾತ 40 ಭಾರತೀಯ ಸೈನಿಕರನ್ನು ಹತ್ಯೆಗೈದನು.