Sunday, 15th December 2024

ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಮುಂಬೈ: ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಪಾರ್ಥೀವ ಶರೀರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದರು.

ದೆಹಲಿಯಿಂದ ಮುಂಬೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದ್ದ ಲತಾ ಮಂಗೇಶ್ಕರ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಬಳಿಕ ಕುಟುಂಬಸ್ಥರ ಬಳಿಗೆ ತೆರಳಿ ಸಾಂತ್ವನ ಹೇಳಿದರು. ಈ ವೇಳೆ ಅನೇಕ ಬಾಲಿವುಡ್ ನಟ, ನಟಿಯರು ಕೂಡ ಲತಾ ಮಂಗೇಶ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.