Wednesday, 30th October 2024

ಸೋಂಕಿನ ಗಣನೀಯ ಇಳಿಕೆ: ಕುತೂಹಲ ಕೆರಳಿಸಿದ ಇಂದಿನ ಪ್ರಧಾನಿ ಸುದ್ದಿಗೋಷ್ಠಿ

ನವದೆಹಲಿ : ದೇಶಾದ್ಯಂತ ಕೋವಿಡ್ ಸೋಂಕಿನ ಗಣನೀಯ ಇಳಿಕೆಯಾಗುತ್ತಿರುವ ಈ ಸಂದರ್ಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು, ಸೋಮವಾರ  5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿಯವರ ಸುದ್ದಿಗೋಷ್ಠಿ ತೀವ್ರ ಕುತೂಹಲ ಕೆರಳಿಸಿದ್ದು, ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ. ಇಂದಿನ ದೇಶವನ್ನುದ್ದೇಶಿಸಿ ಪ್ರಧಾನಿಯವರು ಮಾತನಾಡುತ್ತಿರುವ ಭಾಷಣದಲ್ಲಿ, ದೇಶದ ಪ್ರಸ್ತುತ ಕೋವಿಡ್ ಸ್ಥಿತಿಗತಿ ಹಾಗೂ ನಿಯಂತ್ರಣ ಕ್ರಮಗಳ ಕುರಿತಂತೆ, ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗಿದೆ.