Sunday, 24th November 2024

ರಾಷ್ಟ್ರದ ಹೆಣ್ಣು ಮಕ್ಕಳಿಗೆ ಗೌರವ ವಂದನೆ ಸಲ್ಲಿಸಿದ ಮೋದಿ

ನವದೆಹಲಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಾದ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಹೆಣ್ಣು ಮಕ್ಕಳಿಗೆ ಗೌರವ ವಂದನೆ ಸಲ್ಲಿಸಿದ್ದಾರೆ.

ಹೆಣ್ಣು ಮಕ್ಕಳ ಸಶಕ್ತೀಕರಣ ಹಾಗೂ ಅವರು ಘನತೆ, ಅವಕಾಶದ ಜೀವನ ನಡೆಸಲು ಖಾತರಿ ನೀಡುವಲ್ಲಿ ಕಾರ್ಯ ನಿರ್ವಹಿಸು ತ್ತಿರುವ ಎಲ್ಲರನ್ನು ಅವರು ಪ್ರಶಂಸಿಸಿದ್ದಾರೆ. ಶಿಕ್ಷಣ, ಉತ್ತಮ ಆರೋಗ್ಯ ಸೇವೆ ಲಭ್ಯ ಹಾಗೂ ಲಿಂಗತ್ವ ಸೂಕ್ಷ್ಮತೆಯನ್ನು ಸುಧಾರಿಸುವುದು ಸೇರಿದಂತೆ ಹೆಣ್ಣು ಮಕ್ಕಳ ಸಬಲೀಕರಣವನ್ನು ಕೇಂದ್ರೀಕರಿಸಿ ಕೇಂದ್ರ ಸರಕಾರ ಹಲವು ಕ್ರಮಗಳನ್ನು ತೆಗೆದು ಕೊಂಡಿದೆ” ಎಂದಿದ್ದಾರೆ.

ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೇಂದ್ರದ ಮಹಿಳೆ ಹಾಗೂ ಮಕ್ಕಳ ಅಭಿವೃದ್ಧಿ ಸಚಿವಾಲಯ 2008ರಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆರಂಭಿಸಿತ್ತು.