Friday, 13th December 2024

ಜೈಸಲ್ಮೇರ್‌’ನಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಂದಿನಂತೆ, ಈ ವರ್ಷದ ದೀಪಾವಳಿ ಹಬ್ಬವನ್ನು ಜೈಸಲ್ಮೇರ್‌ನಲ್ಲಿ ಸೈನಿಕರೊಂದಿಗೆ ಈ ಬಾರಿ ದೀಪಾವಳಿಯನ್ನು ಆಚರಿಸಲಿದ್ದಾರೆ. ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರ್ವಾನೆ
ಭಾಗವಹಿಸಲಿದ್ದಾರೆ. 
2014ರಲ್ಲಿ ಪ್ರಧಾನಿಯಾದ ನಂತರ ಮೋದಿ ಉತ್ತರಾಖಂಡ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದರು.
ಈ ಉತ್ಸವಗಳಲ್ಲಿ ನಮ್ಮ ಕೆಚ್ಚೆದೆಯ ಸೈನಿಕರನ್ನು ಸಹ ನಾವು ನೆನಪಿನಲ್ಲಿಡಬೇಕು. ನಮ್ಮ ಹಬ್ಬಗಳನ್ನು ನೆನಪಿನಲ್ಲಿಟ್ಟುಕೊಂಡು ಆಚರಿಸಬೇಕು. ತಾಯಿ ಭಾರತಾಂಬೆಯ ಈ ಧೈರ್ಯಶಾಲಿ ಪುತ್ರರು ಮತ್ತು ಪುತ್ರಿಯರ ಗೌರವಾರ್ಥ ನಾವು ಮನೆಯಲ್ಲಿ ದೀಪವನ್ನು ಬೆಳಗಿಸಬೇಕು ಎಂದರು.
2019ರಲ್ಲಿ ರಾಜೌರಿ, ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ನಿಯೋಜಿಸಲಾದ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಲು ಮೋದಿ ರಾಜೌರಿಗೆ ಆಗಮಿಸಿದ್ದರು. 2018ರಲ್ಲಿ ಉತ್ತರಾಖಂಡದ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ಚೀನಾ ಗಡಿಯ ಸಮೀಪವಿರುವ ಹರ್ಸಿಲ್ ಗ್ರಾಮದ ಕೆಂಟ್ ಪ್ರದೇಶದಲ್ಲಿ ಭಾರತೀಯ ಸಶಸ್ತ್ರ ಪಡೆ ಮತ್ತು ಐಟಿಬಿಪಿ ಸಿಬ್ಬಂದಿಯನ್ನು ಭೇಟಿಯಾದರು. 
2016ರಲ್ಲಿ ಹಿಮಾಚಲ ಪ್ರದೇಶದ ಚೀನಾ ಗಡಿಯ ಬಳಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಿಸಿದರು. 2015ರಲ್ಲಿ ಅಮೃತಸರ (ಪಂಜಾಬ್) ಗಡಿಯಲ್ಲಿ ಪ್ರಧಾನಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ವರ್ಷದಲ್ಲಿ ಎಂದರೆ. 2014ರಲ್ಲಿ ಸಿಯಾಚಿನ್‌ನಲ್ಲಿ ಸೈನಿಕರಲ್ಲಿ ಮೋದಿ ದೀಪಾವಳಿ ಆಚರಿಸಿದರು.