ನವದೆಹಲಿ: ದೇಶಾದ್ಯಂತ ಗುರು ಪೂರ್ಣಿಮಾ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಜನತೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು ಶುಭಾಶಯ ಕೋರಿದ್ದಾರೆ.
ಗುರು ಪೂರ್ಣಿಮಾ ಹಿನ್ನೆಲೆಯಲ್ಲಿ ಜೀವನದ ಪ್ರತಿ ಹಂತದಲ್ಲೂ ತಿದ್ದಿ ನಡೆಸಿದ ಗುರು ಹಿರಿಯರಿಗಾಗಿ ಈ ದಿನನ್ನು ಸಮರ್ಪಿಸಲಾಗುತ್ತದೆ. ಅನೇಕರು ತಮ್ಮ ಗುರುಗಳಿಗೆ ಕೃತಜ್ಞತೆ ಸಲ್ಲಿಸಲು ಉಪವಾಸ ಮಾಡುತ್ತಾರೆ. ಜತೆಗೆ ಹಣ್ಣುಗಳನ್ನು, ಸಿಹಿ ತಿಂಡಿಗಳನ್ನು ಶಿಕ್ಷಕರಿಗೆ ನೀಡುವ ಮೂಲಕ ಈ ದಿನವನ್ನು ಆಚರಿಸುತ್ತಾರೆ. ಗುರು ಪೂರ್ಣಿಮವನ್ನು ಬುದ್ಧ ಪೂರ್ಣಿಮಾ ಅಥವಾ ವ್ಯಾಸ ಪೂರ್ಣಿಮಾ ಎಂದೂ ಕರೆಯುತ್ತಾರೆ.
ಸಾಂಪ್ರದಾಯಿಕವಾಗಿ ಈ ದಿನವನ್ನು ಭಾರತ, ನೇಪಾಳ ಮತ್ತು ಭೂತಾನ್‌ನಲ್ಲಿ ಹಿಂದೂಗಳು, ಬೌದ್ಧರು ಮತ್ತು ಜೈನರು ಆಚರಿಸುತ್ತಾರೆ.