ಮಾಸ್ಕೋ: 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ( Brics Summit) ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ರಷ್ಯಾಕ್ಕೆ(Russia) ತೆರಳಿದ್ದಾರೆ. ರಷ್ಯಾದ ಕಜಾನ್( Kazan) ನಗರದಲ್ಲಿ ಈ ಶೃಂಗಸಭೆ ನಡೆಸಯುತ್ತಿದ್ದು, ಈ ಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್ ಪಿಂಗ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಟರ್ಕಿಯ ಅಧ್ಯಕ್ಷ ರೆಪೆಸ್ ತಯ್ಯಿಸ್ ಎರ್ಡೋಗನ್, ಇರನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.
ರಷ್ಯಾಕ್ಕೆ ತೆರಳುವ ಮುನ್ನ ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ನಾನು ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದ ಕಜಾನ್‌ಗೆ ಹೊರಟಿದ್ದೇನೆ. ಭಾರತವು ಬ್ರಿಕ್ಸ್‌ಗೆ ಅಪಾರ ಪ್ರಾಮುಖ್ಯತೆಯನ್ನು ನೀಡುತ್ತದೆ ಮತ್ತು ನಾನು ಪ್ರಮುಖ ವಿಷಯಗಳ ಕುರಿತು ವ್ಯಾಪಕವಾದ ಚರ್ಚೆಗಳನ್ನು ಎದುರು ನೋಡುತ್ತಿದ್ದೇನೆ. ಅಲ್ಲಿ ವಿವಿಧ ದೇಶಗಳ ನಾಯಕರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಎಂದಿದ್ದಾರೆ.
Leaving for Kazan, Russia, to take part in the BRICS Summit. India attaches immense importance to BRICS, and I look forward to extensive discussions on a wide range of subjects. I also look forward to meeting various leaders there.https://t.co/mNUvuJz4ZK
— Narendra Modi (@narendramodi) October 22, 2024
ಬ್ರಿಕ್ಸ್ ಸಭೆಯ ಪ್ರಮುಖಾಂಶಗಳು
- ರಷ್ಯಾ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪಾಲ್ಗೊಳ್ಳಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಆದರೆ, ಜಿನ್‌ಪಿಂಗ್ ಮತ್ತು ಮೋದಿ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆಯೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.
- ಶೃಂಗಸಭೆಗೆ ಆಹ್ವಾನಿಸಲಾದ ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಮತ್ತು ಇತರ ನಾಯಕರೊಂದಿಗೆ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
- ಭಾರತದ ಜತೆಗಿನ ಪಾಲುದಾರ ರಾಷ್ಟ್ರಗಳೊಂದಿಗೆ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿತ ಮಾತುಕತೆ ನಡೆಸಲು ಸಾಧ್ಯತೆ ಇದೆ.
- ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ವಿನಯ್ ಕುಮಾರ್, ಭಾರತವು ಬ್ರಿಕ್ಸ್ ರಾಷ್ಟ್ರಗಳ ಜತೆ ಆರ್ಥಿಕ ಸಹಕಾರಕ್ಕೆ ಬದ್ಧವಾಗಿದೆ ಎಂದು ಒತ್ತಿಹೇಳಿದರು.
- ಉಕ್ರೇನ್‌ನಲ್ಲಿ ತನ್ನ ಸೈನ್ಯವನ್ನು ನಿಯೋಜಿಸಿದ ನಂತರ ರಷ್ಯಾದಲ್ಲಿ ನಡೆಯುತ್ತಿರುವ ಅತಿದೊಡ್ಡ ಸಭೆ ಇದಾಗಿದೆ.
- ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಏಪ್ರಿಲ್ 2022ರ ನಂತರ ರಷ್ಯಾಕ್ಕೆ ಅವರ ಮೊದಲ ಪ್ರವಾಸ ಇದಾಗಿದೆ. ಅಧಿಕೃತ ಮೂಲಗಳ ಪ್ರಕಾರ ಅವರು ಗುರುವಾರ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ.
- ಬ್ರಿಕ್ಸ್ ಗುಂಪು ಈಗ ವಿಶ್ವದ ಜನಸಂಖ್ಯೆಯ 45 ಪ್ರತಿಶತ ಮತ್ತು ಅದರ ಆರ್ಥಿಕತೆಯ 35 ಪ್ರತಿಶತವನ್ನು ಪ್ರತಿನಿಧಿಸುತ್ತದೆ.
ಈ ಸುದ್ದಿಯನ್ನೂ ಓದಿ: Narendra Modi: ಜಾಗತಿಕ ಸಮಸ್ಯೆಗಳಿಗೆ ಯುದ್ಧ ಭೂಮಿಯಿಂದ ಪರಿಹಾರ ದೊರೆಯದು; ನರೇಂದ್ರ ಮೋದಿ