Wednesday, 11th December 2024

ಡಿ.25ರಂದು ಉತ್ತರ ಪ್ರದೇಶ ರೈತರೊಂದಿಗೆ ‘ಪ್ರಧಾನಿ’ ಸಂವಾದ

ನವದಹೆಲಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ(ಡಿಸೆಂಬರ್ 25) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.

ಉತ್ತರ ಪ್ರದೇಶದಲ್ಲಿ 2,500ಕ್ಕೂ ಹೆಚ್ಚು ಸ್ಥಳಗಳಲ್ಲಿ ‘ಕಿಸಾನ್ ಸಂವಾದ’ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದೆ. ಈ ಸಂಬಂಧ ಉತ್ತರ ಪ್ರದೇಶ ಬಿಜೆಪಿ ಘಟಕದ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್, ರಾಜ್ಯದ ವಿವಿಧ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿಗೆ ವರ್ಚ್ಯುವಲ್ ಸಭೆ ನಡೆಸಿದರು. ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರವು ಬಡವರು ಮತ್ತು ರೈತರಿಗೆ ಸಮರ್ಪಿತವಾಗಿದೆ ಎಂದು ಹೇಳಿದರು.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ, ಹರಿಯಾಣ ಗಡಿಯಲ್ಲಿ ರೈತ ಸಂಘಟನೆಗಳನ್ನು ಪ್ರತಿಭಟನೆಯನ್ನು ಮುಂದು ವರಿಸಿದೆ. ಈ ಮಧ್ಯೆ ನೂತನ ಕಾಯ್ದೆ ಕುರಿತು ಕೇಂದ್ರ ಸರ್ಕಾರ ರೈತರ ಮನವರಿಕೆ ಮಾಡುವ ಪ್ರಯತ್ನದಲ್ಲಿದೆ