Thursday, 12th December 2024

ಕೋವಿಡ್‌ ವಿರುದ್ಧ ಹೋರಾಡಲು ಸಾರ್ವಜನಿಕರು ಮುಂದಾಗಬೇಕು: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಬುಧವಾರ ಮುನ್ನೆಚ್ಚರಿಕೆ ಕ್ರಮ ಗಳನ್ನು ಕೈಗೊಳ್ಳುವ ಮೂಲಕ ‘ಕೋವಿಡ್‌ 19’ ವಿರುದ್ಧ ಹೋರಾಡಲು ಸಾರ್ವಜನಿಕರು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.

ಕಳೆದ ಮೂರು ದಿನಗಳಲ್ಲಿ ದೇಶದಲ್ಲಿ ಹೆಚ್ಚು ಸೋಂಕಿನ ಪ್ರಕರಣಗಳು ವರದಿ ಯಾಗಿವೆ. ದೇಶದಲ್ಲಿ ಕರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸೋಂಕಿನ ವಿರುದ್ಧ ಹೋರಾಡಲು ಸಾರ್ವಜನಿಕರು ಮಾಸ್ಕ್‌ ಧರಿಸುವುದು, ನಿಯಮಿತವಾಗಿ ಕೈತೊಳೆಯುವುದು ಸೇರಿದಂತೆ ಕೋವಿಡ್ 19 ವಿರುದ್ಧದ ಹೋರಾಟಕ್ಕೆ ರೂಪಿಸಿರುವ ಶಿಷ್ಟಾಚಾರಗಳನ್ನು ಅನುಸರಿಸಬೇಕು ಎಂದು ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

‘ಇದೇ ವೇಳೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಮತ್ತು ಆರೋಗ್ಯವಾಗಿರಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಅನುಸರಿಸಿ’ ಎಂದು ಹೇಳಿದರು. ‘ವಿಶ್ವ ಆರೋಗ್ಯ ದಿನಚಾರಣೆ, ನಮ್ಮ ಭೂಮಿ ಆರೋಗ್ಯವನ್ನು ಕಾಪಾಡಲು ಹಗಲು ರಾತ್ರಿ ಶ್ರಮಿಸುತ್ತಿರುವ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುವ ಮತ್ತು ಅವರ ಕಾರ್ಯಕ್ಕೆ ಮೆಚ್ಚಿಗೆ ಸೂಚಿಸುವ ದಿನವಾಗಿದೆ ‘ ಎಂದು ಟ್ವೀಟ್ ಮಾಡಿ ದ್ದಾರೆ.