Wednesday, 30th October 2024

ಅರಣ್ಯ, ಪ್ರಾಣಿಗಳ ರಕ್ಷಣೆಗೆ ಶ್ರಮಿಸುತ್ತಿರುವವರಿಗೆ ಸೆಲ್ಯೂಟ್: ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರಮುಖ ಸಂಪನ್ಮೂಲಗಳಲ್ಲೊಂದಾದ ಅರಣ್ಯ, ಪ್ರಾಣಿಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ವಿಶ್ವ ವನ್ಯಜೀವಿ ದಿನ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ವಿವಿಧ ಪ್ರಾಣಿಗಳ ಸಂಖ್ಯೆಯಲ್ಲಿ  ಹೆಚ್ಚಳ ವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ವಿಶ್ವ ವನ್ಯಜೀವಿ ದಿನ ಹಿನ್ನೆಲೆಯಲ್ಲಿ ಹುಲಿ, ಸಿಂಹ, ಚಿರತೆ ಸೇರಿದಂತೆ ಸಾಕಷ್ಟು ಪ್ರಾಣಿಗಳ ರಕ್ಷಣೆಗಾಗಿ ಕೆಲಸ ಮಾಡುತ್ತಿರುವವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದೇನೆ. ಭಾರತದಲ್ಲಿ ಪ್ರಾಣಿಗಳ ಸಂಖ್ಯೆ ಹೆಚ್ಚಾಗು ತ್ತಿದೆ. ಅರಣ್ಯ ಹಾಗೂ ಪ್ರಾಣಿಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.