Monday, 16th September 2024

ಝೈಡಸ್ ಬಯೋಟೆಕ್ ಪಾರ್ಕ್’ಗೆ ಭೇಟಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿವೃದ್ಧಿಯ ಸ್ಥಿತಿಗತಿಯ ಬಗ್ಗೆ ಅವಲೋಕನ ನಡೆಸಲು ಮುಂದಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಅಹಮದಾಬಾದ್’ಗೆ ಭೇಟಿ ನೀಡಿದ್ದು, ಝೈಡಸ್ ಬಯೋಟೆಕ್ ಪಾರ್ಕ್’ಗೆ ತೆರಳಿ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಪಾರ್ಕ್’ಗೆ ಭೇಟಿ ನೀಡಿದ ಬಳಿಕ ಮಧ್ಯಾಹ್ನ ವಿಶ್ವದ ಅತೀದೊಡ್ಡ ಲಸಿಕಾ ಉತ್ಪಾದನಾ ಕೇಂದ್ರವಾದ ಪುಣೆಯ ಸೀರಂ ಇನ್’ ಸ್ಟಿಟ್ಯೂಟ್’ಗೆ ಭೇಟಿ ನೀಡಲಿದ್ದಾರೆ. ಇನ್ ಸ್ಟಿಟ್ಯೂಟ್ ಬ್ರಿಟನ್’ನ ಆಕ್ಸ್’ಫರ್ಡ್ ವಿವಿ ಮತ್ತು ಆಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸುವ ಮತ್ತು ಪ್ರಯೋಗಕ್ಕೆ ಒಳಪಡಿಸುವ ಗುತ್ತಿಗೆ ಪಡೆದುಕೊಂಡಿದೆ. ಬಳಿಕ ಮೋದಿ ಹೈದರಾಬಾದ್’ನಿಂದ 50 ಕಿ.ಮೀ ದೂರದ ಹಕೀಂಪೇಟ್’ನಲ್ಲಿರುವ ಭಾರತ್ ಬಯೋಟೆಕ್ ಘಟಕಕ್ಕೆ ಭೇಟಿ ನೀಡಲಿದ್ದಾರೆ.

Leave a Reply

Your email address will not be published. Required fields are marked *