ನವದೆಹಲಿ: ಜೂ.9ರಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಮೊದಲು ಇದನ್ನು ಜೂನ್ 8 ಕ್ಕೆ ನಿಗದಿಪಡಿಸಲಾಗಿತ್ತು,
ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) 293 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಿ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಬಿಜೆಪಿ ಅವರ ಮೈತ್ರಿಕೂಟದ ಇತರ ಪಕ್ಷಗಳಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಬೆಂಬಲವನ್ನು ಅವಲಂಬಿಸಬೇಕಾಗಿದೆ.
2024 ರ ಲೋಕಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಗಳನ್ನು ಎಣಿಕೆ ಮಾಡಿದ ನಂತರ ಬಿಜೆಪಿ 272 ಬಹುಮತಕ್ಕೆ 32 ಸ್ಥಾನಗಳ ಕೊರತೆ ಯನ್ನು ಅನುಭವಿಸಿದೆ. 2014 ರಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ, ಅದು ತನ್ನದೇ ಆದ ಬಹುಮತವನ್ನು ಪಡೆಯಲಿಲ್ಲ.