ವಾರಣಾಸಿ : ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗಂಗಾ ಮಾತೆಗೆ ಪೂಜೆ ಸಲ್ಲಿಸಿ ವಾರಣಾಸಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.
2019ರ ಚುನಾವಣೆಯಲ್ಲಿ, ಪಿಎಂ ಮೋದಿ ವಾರಣಾಸಿಯನ್ನು 6,74,664 ಕ್ಕೂ ಹೆಚ್ಚು ಮತಗಳನ್ನು ಮತ್ತು ಶೇ.63.6 ರಷ್ಟು ಮತಗಳನ್ನು ಪಡೆಯುವ ಮೂಲಕ ಗಮನಾರ್ಹ ಅಂತರದಿಂದ ಗೆದ್ದರು. 2014ರಲ್ಲಿ ಮೋದಿ ಅವರು ವಾರಣಾಸಿ ಜೊತೆಗೆ ಗುಜರಾತ್ ನ ವಡೋದರಾದಿಂದ ಸ್ಪರ್ಧಿಸಿದ್ದರು.
ವಾರಣಾಸಿಯಲ್ಲಿ ಮೋದಿ ವಿರುದ್ಧ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ ಸ್ಪರ್ಧಿಸುತ್ತಿರುವುದು ಇದು ಮೂರನೇ ಬಾರಿ. ವಾರಣಾಸಿ ಯಲ್ಲಿ ಜೂನ್ 1 ರಂದು ಏಳನೇ ಮತ್ತು ಅಂತಿಮ ಹಂತದ ಮತದಾನ ನಡೆಯಲಿದೆ.