ನವದೆಹಲಿ: ‘ಇಂಡಿಯಾ’ ಮೈತ್ರಿಕೂಟ ಲೋಕಸಭೆ ಚುನಾವಣೆಯಾದ ನಂತರ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಾರಿಯ ಚುನಾವಣೆಯು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ನಾಶ ಮಾಡಲು ಪ್ರಯತ್ನಿಸುತ್ತಿರುವವರು ಹಾಗೂ ರಕ್ಷಿಸಲು ಹೋರಾಡುತ್ತಿರುವವರ ನಡುವೆ ನಡೆಯಲಿದೆ.
ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದಿಕ್ಕಿಂತಲೂ, ವಾಸ್ತವದಲ್ಲಿ ಸ್ಪರ್ಧೆ ಅತ್ಯಂತ ಪೈಪೋಟಿಯಿಂದ ಕೂಡಿದೆ ಎಂದಿರುವ ಅವರು, ಜಯ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಪಕ್ಷವು ಪಂಚ ನ್ಯಾಯ ಮತ್ತು 25 ಭರವಸೆಗಳನ್ನು ಭರವಸೆ ನೀಡಿದೆ.
2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಬಡ ಕುಟುಂಬದ ಮಹಿಳೆಯರಿಗೆ ಪ್ರತಿ ವರ್ಷ ಲಕ್ಷ ರೂ.ಗಳ ನೆರವು ನೀಡುವುದಾಗಿ ತಿಳಿಸಿದ್ದು, ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಲಾಗಿದೆ.
ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.
ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯ ಲಿದೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ನಮ್ಮ ಪ್ರಣಾಳಿಕೆ ಬಡವರಿಗೆ ಮೀಸಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೇ ಸಂದರ್ಭದಲ್ಲಿ ತಿಳಿಸಿದರು.