Thursday, 12th December 2024

ಗುಂಡಿನ ದಾಳಿ: ಪೊಲೀಸ್ ಅಧಿಕಾರಿಗೆ ಗಾಯ

ಶ್ರೀನಗರ : ಶ್ರೀನಗರದಲ್ಲಿ ಶನಿವಾರ ಭಯೋತ್ಪಾದಕರು ಹಾರಿಸಿದ ಗುಂಡಿಗೆ ಪೊಲೀಸ್ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಲಿ ಜಾನ್ ರಸ್ತೆಯ ಐವಾ ಸೇತುವೆ ಮೂಲಕ ಅಧಿಕಾರಿ ಪೊಲೀಸ್ ಕಂಟ್ರೋಲ್ ರೂಂಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ತಲೆಗೆ ಗಂಭೀರ ವಾದ ಗಾಯವಾಗಿದೆ. ಸದ್ಯ ಅಧಿಕಾರಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತ ರಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಇದೀಗ ಘಟನಾ ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿದ್ದಾರೆ.

ಈ ಹಿಂದೆ ಪಹಲ್ಗಾಮ್ ಪಟ್ಟಣದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉನ್ನತ ಕಮಾಂಡರ್ ಸೇರಿದಂತೆ ಮೂವರು ಭಯೋತ್ಪಾದಕರು ಹತರಾಗಿದ್ದರು. ಭದ್ರತಾ ಪಡೆಗಳ ಮೇಲಿನ ದಾಳಿ ಸೇರಿದಂತೆ ಹಲವಾರು ಭಯೋತ್ಪಾದಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಗುಂಪುಗಳ ಭಾಗವಾಗಿ ದ್ದರು.

ಎನ್‌ಕೌಂಟರ್ ನಡೆದ ಸ್ಥಳದಿಂದ ದೋಷಾರೋಪಣೆಯ ಸಾಮಗ್ರಿಗಳು ಮತ್ತು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಸಂಗ್ರಹವನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಮೊಹಮ್ಮದ್ ಅಶ್ರಫ್ ಖಾನ್, ಹಿಜ್ಬುಲ್ ಮುಜಾಹಿದ್ದೀನ್‌ನ ಬದುಕುಳಿದಿರುವ ಅತ್ಯಂತ ಹಳೆಯ ಭಯೋತ್ಪಾದಕ ಮತ್ತು 2013 ರಿಂದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ ಕಾಣಿಸಿಕೊಂಡಿ ದ್ದಾನೆ.