Sunday, 15th December 2024

ಜ.31ರಂದು ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ

ನವದೆಹಲಿ: ದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಜನವರಿ 31ರಂದು ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜ.30ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಅನಿರ್ದಿಷ್ಟಾವಧಿಗೆ ಮುಂದೂಡಿತ್ತು.